ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಆಕ್ರೋಶ / DODABALLAPUR

ದೊಡ್ಡಬಳ್ಳಾಪುರದ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ರ್ಹನಾ ವರ್ಗಾವಣೆಗೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ತಾಲೂಕು ವೈದ್ಯಾಧಿಕಾರಿ ಡಾ.ಶಾರದಾ, ಮುಖಂಡ ಜಿ.ಲಕ್ಷಿ$್ಮಪತಿ, ಪಿಡಿಒ ಕಾಂತರಾಜು, ಗ್ರಾಪಂ ಮಾಜಿ ಅಧ್ಯೆ ಜ್ಯೋತಿ, ಚಾಂದಿನಿ, ಗ್ರಾಮಸ್ಥರಾದ ಆನಂದ್​, ರಮೇಶ್​ ಇತರರು ಇದ್ದರು.
ದೊಡ್ಡಬಳ್ಳಾಪುರದ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ರ್ಹನಾ ವರ್ಗಾವಣೆಗೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ತಾಲೂಕು ವೈದ್ಯಾಧಿಕಾರಿ ಡಾ.ಶಾರದಾ, ಮುಖಂಡ ಜಿ.ಲಕ್ಷಿ$್ಮಪತಿ, ಪಿಡಿಒ ಕಾಂತರಾಜು, ಗ್ರಾಪಂ ಮಾಜಿ ಅಧ್ಯೆ ಜ್ಯೋತಿ, ಚಾಂದಿನಿ, ಗ್ರಾಮಸ್ಥರಾದ ಆನಂದ್​, ರಮೇಶ್​ ಇತರರು ಇದ್ದರು.
Published on
ದೊಡ್ಡಬಳ್ಳಾಪುರ : ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ರ್ಹನಾ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಆರೋಗ್ಯ ಕೇಂದ್ರದ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಮುಖಂಡ ಜಿ.ಲಕ್ಷಿ$್ಮಪತಿ ಮಾತನಾಡಿ, ವೈದ್ಯಾಧಿಕಾರಿ ಡಾ.ರ್ಹನಾ ರೈತರನ್ನು ಕನಿಷ್ಠಮಟ್ಟದಲ್ಲಿ ನಡೆಸಿಕೊಳ್ಳುತ್ತಿದ್ದಾರೆ. ಗ್ರಾಮಸ್ಥರು ತಲೆನೋವು, ಜ್ವರ, ಕೆಮ್ಮು, ನೆಗಡಿ ಎಂದು ಆಸ್ಪತ್ರೆಗೆ ಬಂದರೆ ರೋಗಿಗಳಿಗೆ ಏಕವಚನದಲ್ಲಿ ನಿಂದಿಸಿ ಬೇಕಾಬಿಟ್ಟಿ ಚಿಕಿತ್ಸೆ ನೀಡಿ ಕಳಿಸುತ್ತಿದ್ದಾರೆ. ದಿನಕ್ಕೆ ಕನಿಷ್ಠ 10 ದೂರುಗಳು ಬರುತ್ತಿವೆ. ಹೆಚ್ಚಿಗೆ ಪ್ರಶ್ನಿಸಿದರೆ ಪೊಲೀಸ್​ ಠಾಣೆಗೆ ದೂರು ನೀಡುತ್ತೇನೆ ಎಂದು ರೋಗಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಜನರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವುದಿಲ್ಲ. ಇಂತಹ ವೈದ್ಯರು ನಮ್ಮೂರಿಗೆ ಬೇಡ ಕೂಡಲೇ ವರ್ಗಾವಣೆ ಮಾಡಿ ನೂತನ ವೈದ್ಯರನ್ನು ನೇಮಿಸಬೇಕು. ಈ ಬಗ್ಗೆ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲೂ ರೆಸ್ಯೂಲೇಷನ್​ ಮಾಡಲಾಗಿದೆ. ಒಂದು ವಾರದಲ್ಲಿ ಕ್ರಮ ತೆಗೆದುಕೊಳ್ಳದಿದ್ದರೆ ಜಿಲ್ಲಾಧಿಕಾರಿಗಳು, ಜಿಲ್ಲಾ ವೈದ್ಯಾಧಿಕಾರಿಗಳಿಗೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸುತ್ತೇವೆ ಎಂದರು.
ಸ್ಥಳಕ್ಕೆ ದೌಡಾಯಿಸಿದ ತಾಲೂಕು ವೈದ್ಯಾಧಿಕಾರಿ ಡಾ.ಶಾರದಾ ಗ್ರಾಮಸ್ಥರ ಸಮಸ್ಯೆ ಆಲಿಸಿ ಬಳಿಕ ಮಾತನಾಡಿ, ಹಿಂದೆಯೂ ಇಂತಹ ದೂರುಗಳು ಬಂದಿದ್ದವು. ಸರಿಪಡಿಸಿಕೊಳ್ಳಲು ಸೂಚನೆ ನೀಡಲಾಗಿತ್ತು. ಇಂತಹ ಘಟನೆಗಳು ಪುನರಾವರ್ತನೆ ಆಗುತ್ತಿರುವುದು ಸರಿಯಲ್ಲ. ಗ್ರಾಮಸ್ಥರ ಮನವಿಯನ್ನು ಜಿಲ್ಲಾ ವೈದ್ಯಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net