ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಿಸಿಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಮಾಲೀಕನಿಗೆ 50 ಸಾವಿರ ದಂಡದ ನೋಟಿಸ್ ಜಾರಿ ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ಇಂತಹ ವರ್ತನೆ ಮರುಕಳಿಸಿದರೆ ಕಾನೂನು ರೀತಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಜತೆಗೆ ಅಂಗಡಿಯ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.