ಭೂ ದಾಖಲೆ, ಖಾತೆ ಬದಲಾವಣೆ, ಸರ್ವೇ ಕಾರ್ಯ, ಮ್ಯುಟೇಷನ್ ಹಾಗೂ ಇತರ ಸೇವೆಗಳ ವಿಲೇವಾರಿಯಲ್ಲಿ ವಿಳಂಬ ಕಡಿಮೆ ಮಾಡುವ ನಿಟ್ಟಿನಲ್ಲಿ ನಿರಂತರ ಮೇಲ್ವಿಚಾರಣೆ ನಡೆಸಬೇಕು. ಇಲಾಖೆಯ ಎಲ್ಲ ಕಾರ್ಯಗಳ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸಿ ಗಮನಹರಿಸಬೇಕು. ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಆಡಳಿತಾತ್ಮಕ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡುವಂತೆ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.