ಪೋಷಕರು ಮಕ್ಕಳಿಗೆ ಕನ್ನಡದ ಅಭಿಮಾನ ಬೆಳೆಸಲಿ

ಯಶವಂತಪುರ ವಿಧಾನಸಭಾ ಕ್ಷೇತ್ರದ ಕಸಾಪ 6ನೇ ಸಮ್ಮೇಳನ
Writer C.K. Gundanna inaugurated the Kannada Literary Conference organized by the Yeshwantpur Assembly Constituency unit in Kengeri. H.S. Sudhindra Kumar, Honorary Treasurer V.V. Satyanarayana, and other office-bearers were present.
ಕೆಂಗೇರಿಯಲ್ಲಿ ಆಯೋಜಿಸಿದ್ದ ಯಶವಂತಪುರ ವಿಧಾನಸಭಾ ಕ್ಷೇತ್ರ ಘಟಕದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಹಿತಿ ಸಿ.ಕೆ.ಗುಂಡಣ್ಣ ಉದ್ಘಾಟಿಸಿದರು. ಎಚ್.ಎಸ್.ಸುಧೀಂದ್ರ ಕುಮಾರ್ ಗೌರವ ಕೋಶಾಧ್ಯಕ್ಷ ವಿ.ವಿ.ಸತ್ಯನಾರಾಯಣ, ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
Published on: 

ಕೆಂಗೇರಿ : ಪೋಷಕರು ತಮ್ಮ ಮಕ್ಕಳಿಗೆ ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆಯ ಅಭಿಮಾನವನ್ನು ಬೆಳೆಸಬೇಕು ಎಂದು ಸಾಹಿತಿ ಸಿ.ಕೆ.ಗುಂಡಣ್ಣ ಹೇಳಿದರು.

ಕೆಂಗೇರಿ ಉಪನಗರದ ಶ್ರೀ ಗುರುರಾಜ ಸಭಾ ಭವನದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ ಆಯೋಜಿಸಿದ್ದ 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಕನ್ನಡ ಭಾಷೆಯಲ್ಲಿ ಮಾತನಾಡಲು ಕನ್ನಡಿಗರೇ ಹಿಂಜರಿಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ, ಆದ್ದರಿಂದ ಕನ್ನಡ ಶಾಲೆಗಳು ಮುಚ್ಚುವ ಭೀತಿಯಲ್ಲಿವೆ.ಇಂಗ್ಲಿಷ್ ಭಾಷೆಯ ಅವಶ್ಯಕತೆ ಇದೆ ಆದರೆ ಕನ್ನಡ ಭಾಷೆಯನ್ನು ಪ್ರೀತಿಸಿ ಇಂಗ್ಲಿಷ್ ಭಾಷೆಯನ್ನು ವ್ಯಾವಹಾರಿಕವಾಗಿ ಬಳಸಬೇಕು. ಕನ್ನಡ ಭಾಷೆ ನಾಡು,ನುಡಿ, ಸಂಸ್ಕೃತಿಯನ್ನು ಗೌರವಿಸಿ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಚಿತ್ರ ನಟಿ ಶೈಲಶ್ರೀ, ಕನ್ನಡ ಹೋರಾಟಗಾರ ಹಿರಿಯೂರು ರಾಘವೇಂದ್ರ, ಜಾನಪದ ಪರಿಷತ್ ಅಧ್ಯಕ್ಷ ಜಾನಪದ ಬಾಲಾಜಿ, ಅಂತಾರಾಷ್ಟ್ರೀಯ ಜಾನಪದ ಗಾಯಕ ಜೋಗಿಲ ಸಿದ್ದರಾಜು, ಕೇಂದ್ರ ದೂರದರ್ಶನ ನಿರ್ದೇಶಕಿ ಕು.ಮೇಘನ, ಚೀನಾದ ಕನ್ನಡ ಅಭಿಮಾನಿ ಹಿರೋಷಿಸಕಮೋಟೋ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭಕ್ಕೂ ಮುನ್ನ ನಡೆದ ಸಮ್ಮೇಳನದ ಪಲ್ಲಕ್ಕಿ ಮೆರವಣಿಗೆಯಲ್ಲಿ ಸ್ಥಳೀಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಕಲಾ ತಂಡಗಳು ಭಾಗವಹಿಸಿ ಮೆರವಣಿಗೆಗೆ ಮೆರಗು ತಂದವು. ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಕಾಶ್ ಮೂರ್ತಿ, ಯಶವಂತಪುರ ವಿಧಾನಸಭಾ ಕ್ಷೇತ್ರ ಘಟಕದ ಅಧ್ಯಕ್ಷ ಎಚ್.ಎಸ್.ಸುಧೀಂದ್ರ ಕುಮಾರ್, ಕನ್ನಡ ಪ್ರಭ ಸಂಪಾದಕ ಗಿರೀಶ್ ಹನ್ಸಾರ್, ಜಾನಪದ ಗಾಯಕ ಡಾ.ಅಪ್ಪಗೆರೆ ತಿಮ್ಮರಾಜು ಮತ್ತಿತರರು ಪಾಲ್ಗೊಂಡಿದ್ದರು.