ಮಕ್ಕಳ ಶುಚಿತ್ವದತ್ತ ಪಾಲಕರು ಗಮನಹರಿಸಲಿ

ಬೆಟ್ಟದಪುರ ಸಮೀಪದ ಬೆಟ್ಟದತುಂಗಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಬಿಇಒ ರವಿಪ್ರಸನ್ನ ಮಾತನಾಡಿದರು. ಎಚ್.ಎಸ್. ರವಿ, ಅನಿಲ್, ಮಮತಾ, ಮೋಹನ್, ವೀಣಾ, ಲಕ್ಷ್ಮಿ, ರಜೀನಾ, ಆಶಾ, ಗಿರಿಜಾ ಇತರರು ಇದ್ದರು.
ಬೆಟ್ಟದಪುರ ಸಮೀಪದ ಬೆಟ್ಟದತುಂಗಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಬಿಇಒ ರವಿಪ್ರಸನ್ನ ಮಾತನಾಡಿದರು. ಎಚ್.ಎಸ್. ರವಿ, ಅನಿಲ್, ಮಮತಾ, ಮೋಹನ್, ವೀಣಾ, ಲಕ್ಷ್ಮಿ, ರಜೀನಾ, ಆಶಾ, ಗಿರಿಜಾ ಇತರರು ಇದ್ದರು.
Published on

ಬೆಟ್ಟದಪುರ:

ಮಕ್ಕಳಲ್ಲಿ ಕಂಡುಬರುವ ಜಂತು ಹುಳುವಿನ ಸಮಸ್ಯೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಜಂತು ಹುಳು ನಿವಾರಣೆಯ ಜತೆಗೆ ವೈಯಕ್ತಿಕ ಸ್ವಚ್ಛತೆ, ಕೈತೊಳೆಯುವ ಅಭ್ಯಾಸ ಹಾಗೂ ಸ್ವಚ್ಛ ಪರಿಸರದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ಪಿರಿಯಾಪಟ್ಟಣ ಕ್ಷೇತ್ರ ಶಿಕ್ಷಣಾಧಿಕಾರಿ ರವಿಪ್ರಸನ್ನ ಹೇಳಿದರು.


ತಾಲೂಕಿನ ಬೆಟ್ಟದಪುರ ಸಮೀಪದ ಬೆಟ್ಟದತುಂಗಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದವತಿಯಿಂದ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದಲ್ಲಿ ಮಾತನಾಡಿದರು.


ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಉತ್ತಮ ಆರೋಗ್ಯ ಬಹುಮುಖ್ಯ. ಜಂತು ಹುಳುಗಳ ಸೋಂಕಿನಿಂದ ಮಕ್ಕಳಲ್ಲಿ ಹೊಟ್ಟೆ ನೋವು, ಹಸಿವು ಕಡಿಮೆಯಾಗುವುದು, ರಕ್ತಹೀನತೆ, ದೈಹಿಕ ದೌರ್ಬಲ್ಯ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಆದ್ದರಿಂದ ಆರೋಗ್ಯ ಇಲಾಖೆ ನೀಡುವ ಜಂತು ಹುಳು ನಿವಾರಣಾ ಮಾತ್ರೆಗಳನ್ನು ಮಕ್ಕಳು ತಪ್ಪದೇ ಸೇವಿಸುವಂತೆ ಪಾಲಕರು ಹಾಗೂ ಶಿಕ್ಷಕರು ಗಮನಹರಿಸಬೇಕು ಎಂದರು.


ಶಾಲೆಯ ಮುಖ್ಯಶಿಕ್ಷಕ ರಾಮಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಪಾಠದ ಜತೆಗೆ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು. ಊಟ ಮಾಡುವ ಮೊದಲು ಹಾಗೂ ಶೌಚಗೃಹ ಬಳಸಿದ ನಂತರ ಕೈಗಳನ್ನು ಸಾಬೂನಿನಿಂದ ಸ್ವಚ್ಛವಾಗಿ ತೊಳೆಯುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಉಗುರುಗಳನ್ನು ಕತ್ತರಿಸಿಕೊಳ್ಳುವುದು, ಶುದ್ಧ ನೀರು ಕುಡಿಯುವುದು, ಸ್ವಚ್ಛ ಹಾಗೂ ಪೌಷ್ಟಿಕ ಆಹಾರ ಸೇವಿಸುವುದು ಸೇರಿದಂತೆ ವೈಯಕ್ತಿಕ ಸ್ವಚ್ಛತಾ ಕ್ರಮಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.


ಆರೋಗ್ಯ ನಿರೀಕ್ಷಣಾಧಿಕಾರಿ ಎಚ್.ಎಸ್. ರವಿ, ಸಮುದಾಯ ಆರೋಗ್ಯಾಧಿಕಾರಿ ಅನಿಲ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಮತಾ, ಶಿಕ್ಷಕರಾದ ಮೋಹನ್, ವೀಣಾ, ಲಕ್ಷ್ಮಿ, ರಜೀನಾ, ಆಶಾ, ಗಿರಿಜಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net