ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದೀರಾ ಎಂದು ಪ್ರಶ್ನಿಸಿದಾಗ, "ನಾಳೆ ದೆಹಲಿಗೆ ಹೋದಾಗ ಎಲ್ಲಾ ನಾಯಕರು ಅಲ್ಲೇ ಇರುತ್ತಾರೆ. ಭೇಟಿ ಮಾಡುತ್ತೇನೆ"ಎಂದರು. ರಾಹುಲ್ ಗಾಂಧಿ ಅವರ ಭೇಟಿ ನಂತರ ನಿಮ್ಮ ಬೆಂಬಲಿಗ ಶಾಸಕರು ಸಂತೋಷವಾಗಿದ್ದಾರೆ ಎಂದು ಕೇಳಿದಾಗ, "ಅವರು ನಮ್ಮ ಪಕ್ಷದ ನಾಯಕರು. ನಮ್ಮ ಪಕ್ಷದ ನಾಯಕರನ್ನು, ಅಧ್ಯಕ್ಷರನ್ನು ಭೇಟಿ ಮಾಡುವುದು, ಕರೆ ಮೂಲಕ ಚರ್ಚೆ ಮಾಡುವುದು ಸಹಜ ಪ್ರಕ್ರಿಯೆ. ಅವುಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ" ಎಂದು ಸ್ಪಷ್ಟಪಡಿಸಿದರು.