ಚಿಕ್ಕನಾಯಕನಹಳ್ಳಿಯ BJP ತೀನಂಶ್ರೀ ಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಕಾರ್ಯಕಾರಿಣಿ ಸಭೆಯಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಆಣೆಕಟ್ಟೆ ರಾಕೇಶ್, ಮನು ಭಗತ್, ಮಹಿಳಾ ಮೋರ್ಚಾ ಅಧ್ಯಕ್ಷೆ ಅನುಪಮಾ, ಯುವ ಮೋರ್ಚಾ ಅಧ್ಯಕ್ಷ ಶರತ್ ಅರಳಿಕೆರೆ ಇದ್ದರು.
ತಾಲೂಕಿನ ಬಿಜೆಪಿ ಸಂಘಟನೆಯಲ್ಲಿ ಕಾರ್ಯಕರ್ತರಿಗೆ ಯಾವುದೇ ಅನುಮಾನ ಬೇಡ. ನಾವು ವ್ಯಕ್ತಿಯಾರೇ ಆಗಲಿ ನಮ್ಮ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಬೇಕು ಎಂದು ಬಿಜೆಪಿ ಮಂಡಲಾ ಅಧ್ಯಕ್ಷ ಎಚ್.ಆರ್.ಶಶಿಧರ್ ತಿಳಿಸಿದರು.
ಪಟ್ಟಣದ ತೀನಂಶ್ರೀ ಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, BJP ದೇಶದಲ್ಲಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ಹಾಗೂ ನಾಗರೀಕರಿಗೆ ನೀಡಿರುವಂತಹ ಯೊಜನೆಗಳನ್ನು ಜನಸಾಮಾನ್ಯರಿಗೆ ತಿಳಿಸುವಂತಹ ಕೆಲಸ ಕಾರ್ಯಕರ್ತರು ಮಾಡಬೇಕು ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತರಾಜು ಮಾತನಾಡಿ, ಬೂತ್ಮಟ್ಟದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಸಂಘಟಿತರಾಗಿ ಪಕ್ಷ ಯಾರಿಗೇ ಟಿಕೆಟ್ ನೀಡಿದರೂ, ನಾವು ಪಕ್ಷದ ಪರವಾಗಿ ಕೆಲಸ ಮಾಡಬೇಕು ಎಂದರು.
ಕೇಂದ್ರ ಸರ್ಕಾರದಲ್ಲಿ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಮೇಲೆ ಎಲ್ಲರಿಗೂ ಭಕ್ತಿಬರುವಂತೆ ಮಾಡಿದ್ದಾರೆ. ಅನೇಕ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಮ್ಮ ಜನರ ನೆಮ್ಮದಿ ಜೀವನಕ್ಕೆ ಉತ್ತಮ ಅವಕಾಶಗಳನ್ನು ನೀಡುತ್ತಿದ್ದು, ಕೇಂದ್ರದ ಹಲವು ಯೋಜನೆಗಳ ಬಗ್ಗೆ ಮತ್ತು ಅದರಿಂದಾಗುವ ಅನುಕೂಲಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿಸುವಂತಹ ಕೆಲಸ ಮಾಡಬೇಕು ಎಂದರು.
ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಜಯಸಿಂಹ, ಮಂಡಲದ ಉಪಾಧ್ಯಕ್ಷ ಆರ್.ಎಸ್. ಧನಿಯಾ ಕುಮಾರ್ , ಶ್ರೀಧರ್ ಸಿದ್ದನಕಟ್ಟೆ, ಎಸ್ಸಿ ಮೋರ್ಚಾ ಅಧ್ಯಕ್ಷ ಪೃಥ್ವಿ ಮೋಟಿಹಳ್ಳಿ, ರೈತ ಮೋರ್ಚಾ ಅಧ್ಯಕ್ಷ ನವಿಲೇ ಚಿಕ್ಕೇಗೌಡ ಇದ್ದರು.