ಚಿಂತಾಮಣಿ: ರಾಜ್ಯ ಹೆದ್ದಾರಿ ಬೆಂಗಳೂರು ರಸ್ತೆಯ ಪೆರಮಾಚನಹಳ್ಳಿ ಬಳಿ ಸರಕು ಸಾಗಣೆ ಟೆಂಪೋ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪೆದ್ದೂರು ಗ್ರಾಪಂ ವ್ಯಾಪ್ತಿಯ ತುಮ್ಮಲಹಳ್ಳಿ ನಿವಾಸಿ ಕಲ್ಯಾಣ್ ಕುಮಾರ್ (26) ಚಿಕಿತ್ಸೆ ಲಿಸದೆ ಮೃತಪಟ್ಟಿದ್ದಾನೆ.
ಪ್ಲಂಬಿಂಗ್ ಕೆಲಸ ಮಾಡುವ ಕಲ್ಯಾಣ್ಕುಮಾರ್ ಪೆರಮಾಚನಹಳ್ಳಿಯ ಸಂಬಂಧಿಕರ ಮನೆಗೆ ಬಂದು ಸ್ವಗ್ರಾಮಕ್ಕೆ ತೆರಳಲು ಬಸ್ ನಿಲ್ದಾಣಕ್ಕೆ ಹೋಗಲು ರಸ್ತೆ ದಾಟುತ್ತಿದ್ದಾಗ ಬೆಂಗಳೂರು ಕಡೆಯಿಂದ ಚಿಂತಾಮಣಿಗೆ ಹೋಗುತ್ತಿದ್ದ ಟೆಂಪೋ ಚಾಲಕ ಡಿಕ್ಕಿ ಹೊಡೆದಿದ್ದನು.
ಕೈವಾರ ಹೊರಠಾಣೆ ಪೊಲೀಸರು ಗಾಯಾಳುವನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಸೋಮವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಕೊನೆಯುಸಿರೆಳೆದರು.