ಪ್ರತಿ ಗ್ರಾಮಕ್ಕೂ ಶಾಶ್ವತ ಕುಡಿಯುವ ನೀರು / VIJAYAPUR

ವಿಜಯಪುರದ ದೇವನಹಳ್ಳಿ ರಸ್ತೆಯ ಬಸವೇಶ್ವರ ನಗರದ ಬಸ್​ ನಿಲ್ದಾಣದ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್​. ಮುನಿಯಪ್ಪ ಚಾಲನೆ ನೀಡಿದರು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ವಿ.ಮಂಜುನಾಥ್​, ರಾಮಚಂದ್ರಪ್ಪ, ಜಿಪಂ ಮಾಜಿ ಅಧ್ಯಕ್ಷ ಬಿ.ರಾಜಣ್ಣ, ಪುರಸಭೆ ಅಧ್ಯಕ್ಷೆ ಭವ್ಯಾ ಮಹೇಶ್​ ಇತರರು ಇದ್ದರು.
ವಿಜಯಪುರದ ದೇವನಹಳ್ಳಿ ರಸ್ತೆಯ ಬಸವೇಶ್ವರ ನಗರದ ಬಸ್​ ನಿಲ್ದಾಣದ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್​. ಮುನಿಯಪ್ಪ ಚಾಲನೆ ನೀಡಿದರು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ವಿ.ಮಂಜುನಾಥ್​, ರಾಮಚಂದ್ರಪ್ಪ, ಜಿಪಂ ಮಾಜಿ ಅಧ್ಯಕ್ಷ ಬಿ.ರಾಜಣ್ಣ, ಪುರಸಭೆ ಅಧ್ಯಕ್ಷೆ ಭವ್ಯಾ ಮಹೇಶ್​ ಇತರರು ಇದ್ದರು.
Published on
ವಿಜಯಪುರ : ಮುಂದಿನ ವರ್ಷದೊಳಗೆ ಎತ್ತಿನಹೊಳೆ ಹಾಗೂ ಕಾವೇರಿ 5ನೇ ಹಂತದ ಯೋಜನೆಯ ಮೂಲಕ ದೇವನಹಳ್ಳಿ ಮತ್ತು ವಿಜಯಪುರಕ್ಕೆ ಮಾತ್ರವಲ್ಲದೆ, ಪ್ರತಿ ಗ್ರಾಮಗಳಿಗೂ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್​. ಮುನಿಯಪ್ಪ ಹೇಳಿದರು.
ಪಟ್ಟಣದ ದೇವನಹಳ್ಳಿ ರಸ್ತೆಯ ಬಸವೇಶ್ವರ ನಗರದ ಬಸ್​ ನಿಲ್ದಾಣದ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಜನರಿಗೆ ಮೂಲ ಸೌಕರ್ಯಗಳಾದ ನೀರು, ವಿದ್ಯುತ್​ ಹಾಗೂ ನೈರ್ಮಲ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ. ಶೀಘ್ರದಲ್ಲಿಯೇ ಯುಜಿಡಿ (ಒಳಚರಂಡಿ) ಯೋಜನೆಗೆ ಅನುದಾನ ಬಿಡುಗಡೆಯಾಗಲಿದೆ ಎಂದು ಸಚಿವರು ಭರವಸೆ ನೀಡಿದರು.
ಎತ್ತಿನಹೊಳೆ ಯೋಜನೆಯಡಿ ಕುಂದಾಣ ಬಳಿ ಟ್ಯಾಂಕ್​ ನಿರ್ಮಿಸಲಾಗುತ್ತಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​ ಅವರಿಂದ ಶಂಕುಸ್ಥಾಪನೆ ನೆರವೇರಿಸಲಾಗುವುದು. ಪಟ್ಟಣದ ವೈದ್ಯರ ವರ್ಗಾವಣೆ ಬಗ್ಗೆ ಆರೋಗ್ಯ ಸಚಿವರೊಂದಿಗೆ ಚರ್ಚಿಸಲಾಗಿದೆ. ಶಾಲೆ ಮತ್ತು ಅಂಗನವಾಡಿಗಳ ಬಿಸಿಯೂಟಕ್ಕೆ ಬೇಳೆಕಾಳು ಪೂರೈಕೆಯಾಗದಿರುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.
ಬೆಸ್ಕಾಂ ಹೊಸಕೋಟೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ವೆಂಕಟೇಶಪ್ಪ, ಹಾಲಿ ಸದಸ್ಯರಾದ ಎಂ.ಸತೀಶ್​ ಕುಮಾರ್​, ರಾಜಣ್ಣ, ಇಕ್ಬಾಲ್​, ಕೇಶವಪ್ಪ, ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷ ದಿನ್ನೂರು ವೆಂಕಟೇಶ್​, ಟೌನ್​ ಕಾಂಗ್ರೆಸ್​ ಅಧ್ಯಕ್ಷ ವಿ.ಎಂ.ನಾಗರಾಜು, ಕಾರ್ಯದರ್ಶಿ ಕೋಕೋ ಕೋಲಾ ಮಂಜುನಾಥ್​, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಕಾಂಗ್ರೆಸ್​ ಅಧ್ಯಕ್ಷ ಮುಬಾರಕ್​, ಟೌನ್​ ಕಾಂಗ್ರೆಸ್​ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಫ್ಜಲ್​, ಯುವ ಕಾಂಗ್ರೆಸ್​ನ ಹರೀಶ್​, ಗಿರೀಶ್​, ಆರ್​ಎಂಸಿಟಿ ಮಂಜುನಾಥ್​, ಪ್ರಥಮ ದರ್ಜೆ ಗುತ್ತಿಗೆದಾರ ವೆಂಕಟೇಶ್​, ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ, ಬೆಸ್ಕಾಂ ಅಧಿಕಾರಿಗಳಾದ ಲಕ್ಷಿ$್ಮಕಾಂತ್​, ಭವಾನಿ ಶಂಕರ್​, ನಾರಾಯಣಸ್ವಾಮಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net