Karanji ಗುಬ್ಬಿ ಪಟ್ಟಣದ ಶುಭೋದಯ ಶಾಲೆಯಲ್ಲಿ ಆಯೋಜಿಸಿದ್ದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಪಪಂ ಸದಸ್ಯ ರಂಗಸ್ವಾಮಿ, ಜಿ.ಆರ್.ಶಿವಕುಮಾರ್, ಸಿಆರ್ಪಿ ನಾಗಭೂಷಣ್, ಶುಭೋದಯ ಶಾಲೆಯ ಮುಖ್ಯಸ್ಥ ಅಮರ್ ಮತ್ತಿತರರು ಇದ್ದರು.
ಗುಬ್ಬಿ: ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿಗಳು ಪೂರಕ ಎಂದು ಪಟ್ಟಣ ಪಂಚಾಯಿತಿ ಸದಸ್ಯ ರಂಗಸ್ವಾಮಿ ತಿಳಿಸಿದರು.
ಪಟ್ಟಣದ ಶುಭೋದಯ ಶಾಲೆಯಲ್ಲಿ ಆಯೋಜಿಸಿದ್ದ ಕ್ಲಸ್ಟರ್ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಮಾತನಾಡಿ, ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ ಮಕ್ಕಳು ಉತ್ತಮ ಪ್ರದರ್ಶನ ನೀಡುವ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗಳಿಗೆ ಕೀರ್ತಿ ತರಬೇಕು ಎಂದರು.
ಇಸಿಒ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರ ತೆಗೆಯಲು, ಪ್ರೋತ್ಸಾಹಿಸಲು ಈ ಕಾರ್ಯಕ್ರಮಗಳು ಅವಶ್ಯವಾಗಿದೆ ಎಂದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಗದೀಶ್ ಮಾತನಾಡಿ, ಪ್ರತಿಭಾ ಕಾರಂಜಿ ಒಂದು ಶೈಕ್ಷಣಿಕ ಕಾರ್ಯಕ್ರಮವಾಗಿದ್ದು, ವಿವಿಧ ಸಾಂಸತಿಕ, ಕ್ರೀಡಾ, ಸಾಹಿತ್ಯಿಕ ಕ್ರೀಡೆಗಳನ್ನು ನಡೆಸಲಾಗುತ್ತದೆ. ಇಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳು ಬ್ಲಾಕ್, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ತಮ್ಮದೇಯಾದ ಕಲೆಯನ್ನು ಪ್ರದರ್ಶಿಸುವ ಅವಕಾಶವಿರುತ್ತದೆ ಎಂದರು.
ಇಸಿಒ ನಿಜಾನಂದಮೂರ್ತಿ, ಬಿಆರ್ಪಿ ವಾಸಿಂ, ಪಿಎಂಶ್ರೀ ಶಾಲೆ ಎಸ್ಡಿಎಂಸಿ ಅಧ್ಯಕ್ಷ ಆನಂದ್, ಕಸಾಪ ಕೋಶಾಧ್ಯಕ್ಷ ಸುಬ್ರಮಣ್ಯ, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶಿಕ್ಷಕಿ ಸಿಂಧೂ, ಶಿಕ್ಷಕರಾದ ನಟರಾಜು, ರಘುನಾಥ್ ವಿವಿಧ ಶಾಲೆಯ ಮಕ್ಕಳು ಇದ್ದರು.