ಸಾಹಿತ್ಯ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ

ಅರಸೀಕೆರೆ  ನಗರದ ವಿವೇಕಾನಂದ ಬಿ.ಇಡಿ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಎಚ್. ಆರ್.ಸುಜಾತಾ, ಮಲ್ಲೇಶಗೌಡ, ಮಲ್ಲಿಕಾರ್ಜುನ ಬಿ ಕುಡವಕ್ಕಲಗಿ, ಶೇಖರ್ ಇತರರಿದ್ದರು.
ಅರಸೀಕೆರೆ ನಗರದ ವಿವೇಕಾನಂದ ಬಿ.ಇಡಿ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಎಚ್. ಆರ್.ಸುಜಾತಾ, ಮಲ್ಲೇಶಗೌಡ, ಮಲ್ಲಿಕಾರ್ಜುನ ಬಿ ಕುಡವಕ್ಕಲಗಿ, ಶೇಖರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಸಂಚಾಲಕಿ ಎಚ್.ಆರ್. ಸುಜಾತಾ
  • ವಿವೇಕಾನಂದ ಬಿ.ಇಡಿ ಕಾಲೇಜಿನಲ್ಲಿ

ಅರಸೀಕೆರೆ:

ಸಾಹಿತ್ಯ ಅಧ್ಯಯನ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಸಂಚಾಲಕಿ ಎಚ್.ಆರ್. ಸುಜಾತಾ ಹೇಳಿದರು.

ನಗರದ ವಿವೇಕಾನಂದ ಬಿ.ಇಡಿ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಆಯೋಜಿಸಿದ್ದ ಚಕೋರ ಉಪನ್ಯಾಸಮಾಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಸದಾ ಓದುವಿಕೆಯಲ್ಲಿ ತೊಡಗಿಸಿಕೊಂಡರೆ ಜ್ಞಾನ ಸಂಪತ್ತು ಹೆಚ್ಚಲಿದೆ. ಭಾಷೆ ಬೆಳವಣಿಗೆ ಮನಗಂಡು ಅಕಾಡೆಮಿ ವಿನೂತನ ಚಟುವಟಿಕೆಗಳನ್ನು ಆಯೋಜಿಸುತ್ತಿದ್ದು, ಪ್ರಶಿಕ್ಷಣಾರ್ಥಿಗಳು ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಪ್ರಾಧ್ಯಾಪಕ ಶೇಖರ್ ಮಾತನಾಡಿ, ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಪೂರ್ವದ ಹಳಗನ್ನಡ, ಹಳಗನ್ನಡ, ನಡುಗನ್ನಡ, ಹೊಸಗನ್ನಡದ ಕವಿಗಳ ಕೊಡುಗೆಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಮುಂದಾಗಿರುವುದು ಶ್ಲಾಘನೀಯ ಎಂದರು.
ಅಕಾಡೆಮಿ ಜಿಲ್ಲಾ ಸಂಚಾಲಕ ಡಾ.ಎಚ್. ಎಲ್.ಮಲ್ಲೇಶಗೌಡ ಮಾತನಾಡಿ, ಬದುಕು ಕಟ್ಟಿಕೊಡುವ, ಬಾಂಧವ್ಯ ಬೆಸೆಯುವ ಶಕ್ತಿ ಭಾಷೆಗಿದೆ. ರಾಮಾಯಣ, ಮಹಾಭಾರತ ಮೊದಲಾದ ಮಹಾನ್ ಕಾವ್ಯಗಳನ್ನು ಸಾಮಾನ್ಯರಿಗೆ ತಲುಪುವಂತೆ ಕನ್ನಡದ ಕವಿಗಳು ಮಾಡಿದ್ದಾರೆ ಎಂದು ಹೇಳಿದರು.
ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಬಿ ಕುಡವಕ್ಕಲಗಿ ಮಾತನಾಡಿ, ಕನ್ನಡದ ಸೊಗಡು ಹೆಚ್ಚಿಸುವಲ್ಲಿ ಅನ್ಯ ಭಾಷೆಯ ಕವಿಗಳ ಕೊಡುಗೆಯನ್ನು ಮರೆಯುವಂತಿಲ್ಲ ಎಂದರು.
ಬಿ.ಆರ್.ಶಶಿಧರ್, ರೇಖಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net