ಫ್ಯಾಕ್ಟರಿಸ್ ಕಾಯ್ದೆ, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ಪ್ಲಾಂಟೇಶನ್ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ ಸೇರಿ ಯಾವುದೇ ಕಾನೂನುಗಳು ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸುವ ನಿಬಂಧನೆಗಳನ್ನು ಹೊಂದಿಲ್ಲ. ಆದ್ದರಿಂದ, ಸರ್ಕಾರಕ್ಕೆ ಅಧಿಸೂಚನೆ ಹೊರಡಿಸುವ ಅಧಿಕಾರ ಇಲ್ಲ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.