ಮಂಜೇಗೌಡ ಅವರು ಪಟ್ಟಣದ ಅರಕಲಗೂಡು ರಸ್ತೆಯಲ್ಲಿ ಫರ್ಗೂಷನ್ ಟ್ರ್ಯಾಕ್ಟರ್ ಶೋರೂಂ ಇಟ್ಟುಕೊಂಡಿದ್ದು, ಶುಕ್ರವಾರ ಸಂಜೆ ಸುಮಾರು 7.45ರ ಸಮಯದಲ್ಲಿ ಶೋರೂಂ ಬಳಿ ನಿಂತಿದ್ದಾಗ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬೈಕ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಮಂಜೇಗೌಡರ ಮೇಲೆ ಮಚ್ಚಿನಿಂದ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಂಜೇಗೌಡ ಅವರನ್ನು ಸ್ಥಳೀಯರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪಟ್ಟಣ ಠಾಣೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.