ಮೊದಲ ಸುತ್ತಿನಲ್ಲಿ ಚಾಯ್ಸ್-3 ಆಯ್ಕೆ ಮಾಡಿರುವ ಹಾಗೂ ಇತರ ಚಾಯ್ಸ್ ದಾಖಲಿಸಿರುವ ಅಭ್ಯರ್ಥಿಗಳು ಎರಡನೇ ಸುತ್ತಿಗೆ ಅರ್ಹತೆ ಪಡೆಯಲು ಸೆ.19ರಿಂದ 22ರವರೆಗೆ ಒಂದು ಲಕ್ಷ ರೂ. (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು 50 ಸಾವಿರ ರೂ.) ಕಾಷನ್ ಡೆಪಾಸಿಟ್ ಪಾವತಿಸಬೇಕು. ಅದರ ಬಳಿಕವೇ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.