ತೃತೀಯ ಭಾಷೆಗೆ ಗ್ರೇಡ್​ ಪ್ರಶ್ನಿಸಿ ಪಿಐಎಲ್​| High court

ಹೈಕೋರ್ಟ್​
ಹೈಕೋರ್ಟ್​
Published on

ಪ್ರಮುಖ ಮುಖ್ಯಾಂಶಗಳು

  • ಮಧ್ಯಪ್ರವೇಶಿಸಲು ಹೈಕೋರ್ಟ್​ಗೆ ಕೋರಿಕೆ
ಬೆಂಗಳೂರು: ಹಿಂದಿ ಸೇರಿ ತೃತೀಯ ಭಾಷೆಗಳಾಗಿ ಅಧ್ಯಯನ ಮಾಡುವ ವಿಷಯಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್​ ನೀಡುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್​) ಸಲ್ಲಿಕೆಯಾಗಿದೆ.
ಬೆಂಗಳೂರಿನ ಎಚ್​.ಎನ್​. ಚಂದನಾ ಮತ್ತು ಎಸ್​. ವೆಂಕಟೇಶ್​ ಎಂಬುವವರು ಅರ್ಜಿ ಸಲ್ಲಿಸಿದ್ದು, ಶಿಕ್ಷಣ ಇಲಾಖೆ ಮತ್ತು ಸಚಿವ ಮಧು ಬಂಗಾರಪ್ಪ ಅವರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. 
ತೃತೀಯ ಭಾಷೆಗಳಿಗೆ ಈ ವರ್ಷದಿಂದ ಅಂಕಗಳ ಬದಲಿಗೆ ಗ್ರೇಡ್​ ನೀಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದಾರೆ. ಆದರೆ, ಈ ನಿರ್ಧಾರವನ್ನು ಘೋಷಿಸುವ ಮೊದಲು ತಜ್ಞರೊಂದಿಗೆ ಸೂಕ್ತ ಸಮಾಲೋಚನೆ ನಡೆಸಿಲ್ಲ. ಸರ್ಕಾರದ ನಿರ್ಧಾರಕ್ಕೆ ಸಚಿವ ಸಂಪುಟದ ಒಪ್ಪಿಗೆ ಪಡೆದಿಲ್ಲ. ಏಕಪಯವಾಗಿ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ ಎಂದು ಅರ್ಜಿಯಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲಾಗಿದೆ. 
ಸಚಿವರು ನೀಡಿರುವ ಹೇಳಿಕೆಯಿಂದ ಎಸ್ಸೆಸ್ಸೆಲ್ಲಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ಈ ಕುರಿತ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿಲ್ಲ. ಇದು ವಿದ್ಯಾರ್ಥಿಗಳ ಶಿಕ್ಷಣದ ಹಕ್ಕಿನ ಉಲ್ಲಂನೆಯಾಗಿದೆ. ಅಧಿಕೃತ ಅದೇಶವಿಲ್ಲದೆ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಆದ್ದರಿಂದ, ನ್ಯಾಯಾಲಯ ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net