ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಪಟ್ಟಣ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಶಿಥಿಲಾವಸ್ಥೆ ತಲುಪಿರುವ ಹಾಗೂ ಬೀಳುವ ಹಂತದಲ್ಲಿರುವ ಹಳೆಯ ಕಟ್ಟಡಗಳು ಮತ್ತು ಗೋಡೆಗಳನ್ನು ತಕ್ಷಣವೇ ಗುರುತಿಸಬೇಕು. ಅಪಾಯಕಾರಿ ಕಟ್ಟಡಗಳ ಮಾಲೀಕರಿಗೆ ಕಾನೂನುಬದ್ಧವಾಗಿ ನೋಟಿಸ್ ಜಾರಿ ಮಾಡಿ, ಅವುಗಳನ್ನು ತೆರವುಗೊಳಿಸಲು ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.