ಪಟ್ಟಣದಲ್ಲಿ ಇತ್ತೀಚೆಗೆ ಸುರಿದ ಭಾರಿ ಗಾಳಿ, -ಮಳೆಯಿಂದಾಗಿ ಗುಡಿಸಲುಗಳ ಮೇಲಿದ್ದ ಟಾರ್ಪಾಲಿನ್ ಹಾರಿಹೋಗಿ ಸಂಕಷ್ಟಕ್ಕೆ ಸಿಲುಕಿದ್ದ ಅಲೆಮಾರಿ ಕುಟುಂಬಗಳನ್ನು ಭೇಟಿ ಮಾಡಿ ಮಾತನಾಡಿದ ಅವರು, ದಬ್ಬೇಘಟ್ಟದ ಸರ್ವೇ ನಂಬರ್ನಲ್ಲಿ ನಿಮಗಾಗಿ ಈಗಾಗಲೇ ಜಾಗ ಗುರುತಿಸಲಾಗಿದೆ. ಆದರೆ ಅದು ಪುರಸಭೆ ಅಥವಾ ಪಂಚಾಯಿತಿ ವ್ಯಾಪ್ತಿಗೆ ಸೇರುತ್ತದೆಯೇ ಎಂಬ ಬಗ್ಗೆ ತಾಂತ್ರಿಕ ಗೊಂದಲವಿದೆ. ಈ ವಿಷಯವನ್ನು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ಬಗೆಹರಿಸಲಾಗುವುದು. ಅಲೆಮಾರಿಗಳ ಯಾವುದೇ ಸಮಸ್ಯೆಗೆ ಸ್ಪಂದಿಸಲು ನಾವು ಸದಾ ಸಿದ್ಧ ಎಂದರು.