ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ ಬರೋಬ್ಬರಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಸಿದ್ದರಾಮಯ್ಯ ದೂರಿದರು. "ವಿದ್ಯಾರ್ಥಿಗಳು ಒಂದು ವರ್ಷವಿಡೀ ಹಗಲಿರುಳು ನೀಟ್ ಪರೀಕ್ಷೆಗಾಗಿ ಸಿದ್ಧತೆ ನಡೆಸಿರುತ್ತಾರೆ. ಬಡ ಮತ್ತು ಗ್ರಾಮೀಣ ಭಾಗದ ಮಕ್ಕಳಿಗೆ ಕೋಚಿಂಗ್ ಸೆಂಟರ್‌ಗಳಿಗೆ ಸಾವಿರಾರು ರೂಪಾಯಿ ಹಣ ಕೊಡಲು ಸಾಧ್ಯವಿರುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಪೇಪರ್ ಲೀಕ್ ಮಾಡುವ ಮೂಲಕ ಮೋದಿ ಸರ್ಕಾರ ಬಡವರು, ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೇವಲ ಪರೀಕ್ಷೆಯನ್ನು ಮುಂದೂಡಿ ಕೈತೊಳೆದುಕೊಳ್ಳುತ್ತಿದ್ದಾರೆ. ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು" ಎಂದು ಸಿಎಂ ಆಗ್ರಹಿಸಿದರು.