ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ವಿವೇಕ ಸ್ಮಾರಕ ಉದ್ಘಾಟನೆ
ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಪ್ರಧಾನಿಯನ್ನು ಸಿಎಂ ಡಿಕೆ ಶಿವಕುಮಾರ್ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭವ್ಯ ಸ್ವಾಗತ ಕೋರಿದರು. ಬಳಿಕ ನಗರದ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮದಲ್ಲಿನ ವಿವೇಕ ಸ್ಮಾರಕವನ್ನು ಉದ್ಘಾಟನೆ ಮಾಡಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಕೆ.ಹರೀಶ್‌ಗೌಡ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿ.
1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಆಗಮಿಸಿ, ಇದೇ ಸ್ಥಳದಲ್ಲಿ ಪ್ರವಚನ ನೀಡಿದ್ದರು ಎಂಬ ನೆನಪಿನಲ್ಲಿ ಸ್ಮಾರಕವನ್ನು ಲೋಕಾರ್ಪಣೆ ಮಾಡಲಾಯಿತು. ವಿವೇಕಾನಂದರ ಮ್ಯೂಸಿಯಂ, ಅಧ್ಯಯನ ಕೇಂದ್ರವನ್ನು ವೀಕ್ಷಿಸಿದ ಪ್ರಧಾನಿ, ವಿವೇಕಾನಂದರ ಭೋದನೆಗಳನ್ನು ಸಹ ಓದಿದರು.