ಪೊಲೀಸ್ ಪರೀಕ್ಷೆ: ಪರೀಕ್ಷಾ ಕೇಂದ್ರ ಓಡಿಹೋದ ಅಭ್ಯರ್ಥಿಗಳ ವರದಿ ಕೇಳಿದೆ ಕೆಇಎ
ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಒಎಂಆರ್ ಮತ್ತು ಪ್ರಶ್ನೆ ಪತ್ರಿಕೆ ಸಮೇತ ಕಾಂಪೌಂಡ್ ಹಾರಿ ಹೋಗಿದ್ದು ಏಕೆ?, ಈ ರೀತಿ ಗೊಂದಲ ಸೃಷ್ಟಿಸುವವರ ಉದ್ದೇಶ ಏನು ಎನ್ನುವುದು ತನಿಖೆಯಿಂದ ಗೊತ್ತಾಗಬೇಕು
ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್ ಉತ್ತರ ಪತ್ರಿಕೆಗಳ ಕ್ರಮ ಸಂಖ್ಯೆ ಹೊಂದಾಣಿಕೆ ಆಗಬೇಕೆಂದೇನೂ ಇಲ್ಲ. ಈ ಬಗ್ಗೆ ಸ್ಥಳೀಯ ಸಿಬ್ಬಂದಿ ಮನದಟ್ಟು ಮಾಡಿದರೂ ಕೆಲವರು ಗೊಂದಲ ಸೃಷ್ಟಿಸಿದ್ದು ಏಕೆ?
ನಿಯಮಗಳ ಪ್ರಕಾರ ಪರೀಕ್ಷೆ ಮುಗಿದ ಬಳಿಕವೇ ಅಭ್ಯರ್ಥಿಗಳು ಕೇಂದ್ರದಿಂದ ಹೊರ ಹೋಗಬೇಕು. ಆದರೆ ಈ ಕೇಂದ್ರದಲ್ಲಿ ಕೆಲವರು ಪರೀಕ್ಷೆ ಆರಂಭವಾದ ಅರ್ಧ ಗಂಟೆಯಲ್ಲಿಯೇ ಹೊರ ನಡೆದಿದ್ದಾರೆ. ಕಾಂಪೌಂಡ್ ಹಾರಿ ಓಡಿ ಹೋಗಿರುವುದು ಕಾನೂನು ಪ್ರಕಾರ ಅಪರಾಧ
ಬೆಂಗಳೂರು:
ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ತಿಕೋಟಾದ ಶಾರದಾಂಭಾ ಪಿಯು ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸೃಷ್ಟಿಯಾಗಿರುವ ಗೊಂದಲದ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದೆ.
ಆ ಕೇಂದ್ರದಲ್ಲಿ ಒಎಂಆರ್ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆಗಳು ಹೊಂದಾಣಿಕೆ ಆಗುತ್ತಿಲ್ಲ ಎಂದು ಗೊಂದಲ ಸೃಷ್ಟಿಸಿದ ಅಭ್ಯರ್ಥಿಗಳು ತಮ್ಮ ಬಳಿ ಇದ್ದ ಒಎಂಆರ್ ಮತ್ತು ಪ್ರಶ್ನೆ ಪತ್ರಿಕೆ ಸಮೇತ ಕಾಂಪೌಂಡ್ ಹಾರಿ ಹೋಗಿದ್ದು ಏಕೆ?, ಈ ರೀತಿ ಗೊಂದಲ ಸೃಷ್ಟಿಸುವವರ ಉದ್ದೇಶ ಏನು ಎನ್ನುವುದು ತನಿಖೆಯಿಂದ ಗೊತ್ತಾಗಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪ್ರಶ್ನಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್ ಉತ್ತರ ಪತ್ರಿಕೆಗಳ ಕ್ರಮ ಸಂಖ್ಯೆ ಹೊಂದಾಣಿಕೆ ಆಗಬೇಕೆಂದೇನೂ ಇಲ್ಲ. ಈ ಬಗ್ಗೆ ಸ್ಥಳೀಯ ಸಿಬ್ಬಂದಿ ಮನದಟ್ಟು ಮಾಡಿದರೂ ಕೆಲವರು ಗೊಂದಲ ಸೃಷ್ಟಿಸಿದ್ದು ಏಕೆ?, ನಿಯಮಗಳ ಪ್ರಕಾರ ಪರೀಕ್ಷೆ ಮುಗಿದ ಬಳಿಕವೇ ಅಭ್ಯರ್ಥಿಗಳು ಕೇಂದ್ರದಿಂದ ಹೊರ ಹೋಗಬೇಕು. ಆದರೆ ಈ ಕೇಂದ್ರದಲ್ಲಿ ಕೆಲವರು ಪರೀಕ್ಷೆ ಆರಂಭವಾದ ಅರ್ಧ ಗಂಟೆಯಲ್ಲಿಯೇ ಹೊರ ನಡೆದಿದ್ದಾರೆ. ಕಾಂಪೌಂಡ್ ಹಾರಿ ಓಡಿ ಹೋಗಿರುವುದು ಕಾನೂನು ಪ್ರಕಾರ ಅಪರಾಧ ಎಂದು ಹೇಳಿದ್ದಾರೆ.
ವಿವಾದಗಳು ಇಲ್ಲದೆ ಸುಗಮವಾಗಿ ಪರೀಕ್ಷೆ ನಡೆಸಲು ಪ್ರಾಧಿಕಾರವು ಅವಿರತ ಶ್ರಮ ಹಾಕಿದೆ. ಇದ್ಯಾವುದನ್ನೂ ಲೆಕ್ಕಿಸದೆ ವಿನಾಕಾರಣ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಎಚ್ವರಿಕೆ ನೀಡಿದ್ದಾರೆ.
20 ಜಿಲ್ಲೆಗಳ ಒಎಂಆರ್ ಅಪ್‌ಲೊಡ್
ಪಾರದರ್ಶಕತೆಯ ಭಾಗವಾಗಿ ಪರೀಕ್ಷೆ ಮುಕ್ತಾಯವಾದ ತಕ್ಷಣವೇ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ಕೆಇಎ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗಿದೆ.
ಬೆಂಗಳೂರು, ಕಲಬುರಗಿ, ಹುಬ್ಬಳ್ಳಿ, ಮೈಸೂರು, ದಾವಣಗೆರೆ, ವಿಜಯಪುರ ಹಾಗೂ ರಾಯಚೂರು ನಗರಗಳಲ್ಲಿ ಒಎಂಆರ್ ಸ್ಕ್ಯಾನಿಂಗ್‌ಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಸಂಜೆ 7 ಗಂಟೆವರೆಗೆ ಬೆಳಗಿನ ಪರೀಕ್ಷೆಯ 20 ಜಿಲ್ಲೆಗಳ ಒಎಂಅರ್ ಪ್ರತಿಗಳನ್ನು ಅಪ್‌ಲೋಡ್ ಮಾಡಲಾಗಿದೆ.
ಶೇ.94 ಅಭ್ಯರ್ಥಿಗಳು ಹಾಜರ್
ಬೆಂಗಳೂರಿನ 149 ಸೇರಿ ರಾಜ್ಯದ 884 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ ಉಳಿಕೆ ಮೂಲ ವೃಂದದ 3,77,861 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅವರಲ್ಲಿ ಶೇ 92.52 ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಕಲ್ಯಾಣ ಕರ್ನಾಟಕ ವೃಂದದ 76,676 ಅಭ್ಯರ್ಥಿಗಳ ಪೈಕಿ ಶೇ. 94 ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ತಿಳಿಸಿದ್ದಾರೆ.