ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವತಿಯಿಂದ ನೇಮಕಾತಿಗಳನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಾಗುತ್ತಿದೆ. ಡಿಟೆಕ್ಟಿವ್ ಸಬ್‌ಇನ್‌ಸ್ಪೆಕ್ಟರ್ ಹುದ್ದೆಗಳ ಸಂಖ್ಯೆ ಕಲ್ಯಾಣ ಕರ್ನಾಟಕ(ಕೆಕೆ) 05, ಉಳಿದ ಭಾಗಕ್ಕೆ (ಎನ್‌ಕೆಕೆ) 15 ಸೇರಿ 20 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಸಿದ್ಧವಾಗಿದ್ದು, ಶೀಘ್ರದಲ್ಲೇ ಕೆಇಎ ವತಿಯಿಂದ ಅಧಿಕೃತವಾಗಿ ಪ್ರಕಟಿಸಲಾಗುವುದು. ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿಗೆ ಕಲ್ಯಾಣ ಕರ್ನಾಟಕ 179 ಹುದ್ದೆಗಳು, ಉಳಿದ ಭಾಗಕ್ಕೆ 1,421 ಸೇರಿ ಒಟ್ಟು 1,600 ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಪ್ರಕಟಿಸಲಾಗಿದೆ.