ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದಲೇ ಅಂಚೆ ಸೇವೆ ಆರಂಭ

ಅಂಚೆ
ಅಂಚೆ
Published on
ಕಲಬುರಗಿ: ಕಲಬುರಗಿ ಅಂಚೆ ವಿಭಾಗೀಯ ವ್ಯಾಪ್ತಿಯಲ್ಲಿರುವ ಅಂಚೆ ಕಚೇರಿಗಳಲ್ಲಿ ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಏಕರೂಪದ ವ್ಯವಹಾರ ಸಮಯ ಜಾರಿಗೆ ತರಲಾಗಿದೆ ಎಂದು ಕಲಬುರಗಿ ವಿಭಾಗೀಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಈ ಹೊಸ ವ್ಯವಸ್ಥೆಯಿಂದ ಸಾರ್ವಜನಿಕರು ಬೆಳಿಗ್ಗೆ 9 ಗಂಟೆಯಿಂದಲೇ ಅಂಚೆ ಕಚೇರಿಗಳಿಗೆ ಭೇಟಿ ನೀಡಬಹುದು. ವಿವಿಧ ಅಂಚೆ ಹಾಗೂ ಹಣಕಾಸು ಸೇವೆಗಳನ್ನು ನಿಗದಿತ ಸಮಯದಿಂದಲೇ ಪಡೆಯಬಹುದಾಗಿದೆ ಅವರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net