

ಬೆಂಗಳೂರು:
ಮೋಟಾರು ವಾಹನ ಕಾಯ್ದೆ ಅಡಿ ಕೋಳಿಗಳು ಸಹ ಸಾಕುಪ್ರಾಣಿಗಳ ವ್ಯಾಪ್ತಿಗೆ ಬರಲಿದ್ದು, ಅವುಗಳನ್ನು ಸರಕು ಎಂದು ಪರಿಗಣಿಸಿ ಮಾಲೀಕರಿಗೆ ಅಪಘಾತ ಪರಿಹಾರ ವಿಧಿಸಬೇಕು ಎಂದು ಹೈಕೋರ್ಟ್ ಹೇಳಿದೆ.
✅
ಪಶುವೈದ್ಯರ ವರದಿ ಅನಗತ್ಯ
ಕೋಳಿಗಳ ಸಾವಿಗೆ ಸಂಬಂಧಿಸಿದಂತೆ ಪಶುವೈದ್ಯರ ಯಾವುದೇ ಅಧಿಕೃತ ವರದಿಯನ್ನು ಮಾಲೀಕ ಸಲ್ಲಿಸಿಲ್ಲ ಎಂದು ವಿಮಾ ಕಂಪನಿ ವಾದಿಸಿತ್ತು. ಈ ವಾದವನ್ನು ನಿರಾಕರಿಸಿರುವ ನ್ಯಾಯಪೀಠ, ಪೊಲೀಸರು ಸಲ್ಲಿಸಿರುವ ಚಾರ್ಜ್ಶೀಟ್, ಮಹಜರು ವರದಿ ಹಾಗೂ ಬ್ಯಾಂಕ್ ಖಾತೆಯ ದಾಖಲೆಗಳಲ್ಲಿ ಕೋಳಿಗಳ ಖರೀದಿ ಮತ್ತು ಸಾವಿನ ಬಗ್ಗೆ ಸ್ಪಷ್ಟ ಉಲ್ಲೇಖವಿರುವುದರಿಂದ ಪಶುವೈದ್ಯರ ಪ್ರತ್ಯೇಕ ವರದಿಯ ಅಗತ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.