ದೊಡ್ಡಬಳ್ಳಾಪುರ ನಗರಸಭೆಗೆ ಪ್ರಭಾ ನಾಗರಾಜು ಅಧ್ಯಕ್ಷೆ / DODABALLAPUR

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆಯಾಗಿ ಆಯ್ಕೆಯಾದ ಪ್ರಭಾ ನಾಗರಾಜ್​ ಅವರನ್ನು ಮುಖಂಡರು ಸನ್ಮಾನಿಸಿದರು. ಜೆಡಿಎಸ್​ ಜಿಲ್ಲಾಧ್ಯಕ್ಷ ಮಂಜುನಾಥ, ಉಪಾಧ್ಯಕ್ಷ ಬಂತಿ ವೆಂಕಟೇಶ್​, ಸದಸ್ಯರಾದ ತ.ನ ಪ್ರಭುದೇವ, ಮಲ್ಲೇಶ್​, ರಾಜ್ಯ ವಹ್ನಿಕುಲ ಕ್ಷತ್ರಿಯ ಸಂಘದ ನಿರ್ದೇಶಕ ಮಂಜುನಾಥ ಇತರರು ಇದ್ದರು.

Published on
ದೊಡ್ಡಬಳ್ಳಾಪುರ : ಸುಮಿತ್ರಾ ಆನಂದ್​ ಅವರ ರಾಜೀನಾಮೆಯಿಂದ ತೆರವಾಗಿದ್ದ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್​-&ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಭಾ ನಾಗರಾಜ್​ ಶನಿವಾರ ಚುನಾಯಿತರಾದರು.
31 ಸದಸ್ಯರನ್ನು ಹೊಂದಿರುವ ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್​-&ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಭಾ ನಾಗರಾಜ್​, ಕಾಂಗ್ರೆಸ್​ ಅಭ್ಯರ್ಥಿಯಾಗಿ ರೂಪಿಣಿ ಮಂಜುನಾಥ್​ ನಾಮಪತ್ರ ಸಲ್ಲಿಸಿದ್ದರು.
ಪ್ರಭಾ ನಾಗರಾಜ್​ಗೆ 24 ಹಾಗೂ ರೂಪಿಣಿ ಮಂಜುನಾಥ್​ಗೆ 9 ಮತಗಳು ಬಂದಿದ್ದು, ಬಹುಮತ ಪಡೆದ ಪ್ರಭಾ ನಾಗರಾಜ್​ ನಗರಸಭೆಯ ಅಧ್ಯಕ್ಷೆಯಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಮಂಜುನಾಥ್​, ನಗರಸಭೆ ಪೌರಾಯುಕ್ತ ಆರ್​.ಕಾರ್ತಿಕೇಶ್ವರ ಚುನಾವಣಾ ಕರ್ತವ್ಯ ನಿರ್ವಹಿಸಿದರು.
ಸಂಸದ ಡಾ.ಕೆ.ಸುಧಾಕರ್​ ಹಾಗೂ ದೊಡ್ಡಬಳ್ಳಾಪುರ ಶಾಸಕ ಧೀರಜ್​ ಮುನಿರಾಜು ಸಹ ಮತ ಚಲಾಯಿಸಿದರು.
ಸಂಸದ ಡಾ.ಕೆ ಸುಧಾಕರ್​ ಮಾತನಾಡಿ, ನೂತನ ಅಧ್ಯಕ್ಷರ ನೇತೃತ್ವದಲ್ಲಿ ದೊಡ್ಡಬಳ್ಳಾಪುರವು ಇನ್ನಷ್ಟು ಅಭಿವೃದ್ಧಿಯತ್ತ ಮುನ್ನಡೆಯಲಿ. ಮೂಲಸೌಕರ್ಯ, ಸ್ವಚ್ಛತೆ, ಕುಡಿಯುವ ನೀರು, ರಸ್ತೆ, ಸಾರ್ವಜನಿಕ ಸೇವೆಗಳು ಸೇರಿ ನಾಗರಿಕರ ಬದುಕಿನ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಜನಪರ ಆಡಳಿತ ನೀಡುವಂತಾಗಲಿ ಎಂದು ಹಾರೈಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net