

ಪ್ರಮುಖ ಮುಖ್ಯಾಂಶಗಳು
ರೈತರ ಬದುಕಿಗೆ ಏತ ನೀರಾವರಿ ಸಹಕಾರಿ
| ವಿ.ಪ.ಸದಸ್ಯ ಪ್ರಕಾಶ ಹುಕ್ಕೇರಿ ಹರ್ಷ |
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ:
ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಸ್ತುತ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.ಆದರೆ ಸ್ಥಳೀಯ ಅನ್ನಪೂರ್ಣೇಶ್ವರಿ ಏತ ನೀರಾವರಿ ಯೋಜನೆ ರೈತರ ಬದುಕಿಗೆ ಹೊಸ ಚೈತನ್ಯ ತುಂಬುವ ಕೆಲಸ ಮಾಡುತ್ತಿದೆ ಎಂಂದು ವಿಧಾನ ಪರಿಷತ್ ಸದಸ್ಯ ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ.ಅನ್ನಪೂರ್ಣೇಶ್ವರಿ ಏತ ನೀರಾವರಿ ಯೋಜನೆ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ.
ಕಳೆದ 15 ದಿನಗಳಿಂದ ಅನ್ನಪೂರ್ಣೇಶ್ವರಿ ಏತ ನೀರಾವರಿ ಯೋಜನೆ ತಾಲ್ಲೂಕಿನ ಕಲ್ಲೋಳ ಸಮೀಪದ ಕೃಷ್ಣಾ ನದಿಯಿಂದ ಅತ್ಯಾಧುನಿಕ ಪಂಪ್‌ಗಳ ಮೂಲಕ ನೀರನ್ನು ಎತ್ತಿ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಚಿಕ್ಕೋಡಿ ಬಲದಂಡೆ ಕಾಲುವೆಯ ಶಾಖೆ ಕೆನಾಲ್ (ಸಿಬಿಸಿ) ಮೂಲಕ ನಿರಂತರವಾಗಿ ಹರಿಸಲಾಗುತ್ತಿದೆ. ಇದರ ಪರಿಣಾಮವಾಗಿ ಹಿರೇಕೋಡಿ, ನಾಗರಾಳ, ನೇಜ, ಶಿರಗಾಂವ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ಪರಿಣಾಮವಾಗಿ ಏರಿಕೆಯಾಗಿದೆ.
ಕಾಲುವೆಯಲ್ಲಿ ನಿರಂತರ ನೀರು ಹರಿಯುತ್ತಿದೆ, ಕೃಷಿ ಚಟುವಟಿಕೆಗಳಿಗೆ ಅಗತ್ಯ ನೀರು ಲಭ್ಯವಾಗುತ್ತದೆ. ಜತಗೆ ಗ್ರಾಮೀಣ ಪ್ರದೇಶಗಳಲ್ಲಿ ಜನರು ಮತ್ತು ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆಯೂ ನಿವಾರಣೆಯಾಗಿದೆ. ಒಣ ಬೇಸಾಯವನ್ನೇ ಅವಲಂಬಿಸಿದ್ದ ರೈತರಲ್ಲಿ ಹೊಸ ಆತ್ಮವಿಶ್ವಾಸ ಮೂಡಿದ್ದು, ಕೃಷಿ ಚಟುವಟಿಕೆಗಳು ಮತ್ತೆ ಚುರುಕುಗೊಂಡಿವೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು ವ್ಯಕ್ತಪಡಿಸಿದ್ದಾರೆ.
ಕೋಟ್
"ಅನ್ನಪೂರ್ಣೇಶ್ವರಿ ಏತ ನೀರಾವರಿ ಯೋಜನೆ ಕೇವಲ ನೀರು ಹರಿಸುವ ಯೋಜನೆಯಲ್ಲ, ರೈತರ ಬದುಕಿಗೆ ಭರವಸೆ ತುಂಬುವ ಯೋಜನೆಯಾಗಿದೆ. ಮುಂದೆಯೂ ರೈತರ ಹಿತದೃಷ್ಟಿಯಿಂದ ನೀರಾವರಿ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಬದ್ಧತೆ ಮುಂದುವರಿಯಲಿದೆ.
ಪ್ರಕಾಶ ಹುಕ್ಕೇರಿ
ವಿ.ಪ. ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ