ಉಪ ಕಾರ್ಯದರ್ಶಿ, ಜಿಮ್ಸ್ ಮುಖ್ಯ ಆಡಳಿತಾಧಿಕಾರಿ ಮುಂತಾದ ಹುದ್ದೆಗಳಲ್ಲಿ ಅತ್ಯಂತ ದಕ್ಷತೆಯಿಂದ ಮತ್ತು ಪ್ರಾಮಾಣಿಕತನದಿಂದ ಸೇವೆ ಸಲ್ಲಿಸಿದ ವಿಶಿಷ್ಟ ಸೇವಾ ಸಾಧಕರು ಎಂದು ಗುರುತಿಸಿಕೊಂಡಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಎರಡು ಚಿನ್ನದ ಪದಕಗಳೊಂದಿಗೆ ಪ್ರಥಮ ರಾಂಕ್ ಪಡೆದ ಅವರು ಪ್ರತಿಭಾವಂತ ಆಡಳಿತಾಧಿಕಾರಿಯಾಗಿ ಗುರುತಿಸಿಕೊಂಡವರು. ಹತ್ತು ವರ್ಷಗಳಷ್ಟು ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾನಗರ ಪಾಲಿಕೆ ವಲಯ ಆಯುಕ್ತರು, ದತ್ತಿ ಇಲಾಖೆ ಸಹಾಯಕ ಆಯುಕ್ತರು,ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ದ. ಕ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ವಿಶೇಷ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿ ಜನಾನುರಾಗಿದ್ದಾರೆ. ಇವರಿಗೆ ಶರಣಬಸವೇಶ್ವರ ಸಂಸ್ಥಾನ ಮಠದ ಕಾರ್ಯದರ್ಶಿ ಬಸವರಾಜ್ ದೇಶಮುಖ್ ಮೈಸೂರು ಪೇಟ, ಶಾಲು, ಹಾರ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು ಎಂದು ಹವ್ಯಾಸಿಕಲಾ ಬಳಗದ ಅಧ್ಯಕ್ಷರಾದ ರಮೇಶ್ ಬಂಧು ತಿಳಿಸಿದ್ದಾರೆ