ಸವದತ್ತಿ: ಸುಮಾರು 45 ವರ್ಷಗಳ ಬಳಿಕ ನಗರದಲ್ಲಿ ನಡೆಯುತ್ತಿರುವ ಗ್ರಾಮದೇವಿ ಜಾತ್ರೆ ಹಿನ್ನೆಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸವದತ್ತಿ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ ನಡೆಸಲಾಯಿತು. ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ಗಳನ್ನು ಈಚೆಗೆ ಠಾಣೆಗೆ ಕರೆಯಿಸಿ ಸವದತ್ತಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುರೇಶ ಬೆಂಡೆಗುಂಬಳ ಎಚ್ಚರಿಕೆ ನೀಡಿದರು. ಜಾತ್ರೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟು ಮಾಡಿದರೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಜಾತ್ರೆಗೆ ಲಾಂತರ ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಎಲ್ಲರೂ ಶಾಂತಿ ಕಾಪಾಡಿ, ಪೊಲೀಸ್ ಇಲಾಖೆ ನೀಡುವ ಸೂಚನೆ ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು. ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಇತರರಿದ್ದರು.