ದ್ವಿಭಾಷಾ ಬೋಧನೆ ಪರಿಣಾಮಕಾರಿ ಜಾರಿಗೆ ಸಿದ್ಧತೆ: ಶಿಕ್ಷಕರಿಗೆ ತರಬೇತಿ ಆರಂಭ

ಶಿಕ್ಷಕರಿಗೆ ವಿಶೇಷ ತರಬೇತಿ
ಶಿಕ್ಷಕರಿಗೆ ವಿಶೇಷ ತರಬೇತಿ
Published on

ಪ್ರಮುಖ ಮುಖ್ಯಾಂಶಗಳು

  • 15 ಜಿಲ್ಲೆಗಳ ಎಲ್ಲ ಸರ್ಕಾರಿ ಶಾಲೆಗಳಲ್ಲಿ 1 ರಿಂದ 5ನೇ ತರಗತಿಯವರೆಗೆ ದ್ವಿಭಾಷಾ ಪಠ್ಯಪುಸ್ತಕ ಪರಿಚಯಿಸಲು ಸರ್ಕಾರ ಈಗಾಗಲೇ ತೀರ್ಮಾನ
  • ಇದರ ಭಾಗವಾಗಿ ಶಿಕ್ಷಕರನ್ನು ಸಜ್ಜುಗೊಳಿಸಲು ರಾಜ್ಯ ಮಟ್ಟದ ತರಬೇತಿ ಪೂರ್ಣಗೊಳಿರುವ ಡಿಎಸ್‌ಇಆರ್‌ಟಿ ಜಿಲ್ಲಾ ಮತ್ತು ತಾಲೂಕು ಮಟ್ಟದ ತರಬೇತಿ ಕಾರ್ಯಾಗಾರ
  • ಜಿಲ್ಲಾ ಮಟ್ಟದ ತರಬೇತಿಯು ಮಾ.31 ರಿಂದ ಏ.4ರವರೆಗೆ 5 ದಿನಗಳ ಕಾಲ ನಡೆಯಲಿದ್ದು, ಪ್ರತಿ ತಂಡದಲ್ಲಿ 40 ರಿಂದ 50 ಶಿಕ್ಷಕರು ಭಾಗವಹಿಸಲಿದ್ದಾರೆ.
ಬೆಂಗಳೂರು: 2026-27ನೇ ಸಾಲಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಬೋಧನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಶಿಕ್ಷಣ ಇಲಾಖೆಯು ಸಜ್ಜಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲು ರಾಜ್ಯ ಶಿಕ್ಷಣ ತರಬೇತಿ ಮತ್ತು ಸಂಶೋಧನಾ ಸಂಸ್ಥೆ ಸಮಗ್ರ ಯೋಜನೆಯನ್ನು ರೂಪಿಸಿದೆ.
ರಾಜ್ಯದ ಕೆ.ಪಿ.ಎಸ್ ಶಾಲೆಗಳು, ಪಿಎಂಶ್ರೀ ಶಾಲೆಗಳು ಹಾಗೂ ಗಣಿ ಬಾಧಿತ ತಾಲೂಕುಗಳು ಮತ್ತು 15 ಜಿಲ್ಲೆಗಳ ಎಲ್ಲ ಸರ್ಕಾರಿ ಶಾಲೆಗಳಲ್ಲಿ 1 ರಿಂದ 5ನೇ ತರಗತಿಯವರೆಗೆ ದ್ವಿಭಾಷಾ ಪಠ್ಯಪುಸ್ತಕ ಪರಿಚಯಿಸಲು ಸರ್ಕಾರ ಈಗಾಗಲೇ ತೀರ್ಮಾನ ಕೈಗೊಂಡಿದೆ. ಇದರ ಭಾಗವಾಗಿ ಶಿಕ್ಷಕರನ್ನು ಸಜ್ಜುಗೊಳಿಸಲು ರಾಜ್ಯ ಮಟ್ಟದ ತರಬೇತಿ ಪೂರ್ಣಗೊಳಿರುವ ಡಿಎಸ್‌ಇಆರ್‌ಟಿ ಜಿಲ್ಲಾ ಮತ್ತು ತಾಲೂಕು ಮಟ್ಟದ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದೆ.
ಜಿಲ್ಲಾ ಮಟ್ಟದ ತರಬೇತಿಯು ಮಾ.31 ರಿಂದ ಏ.4ರವರೆಗೆ 5 ದಿನಗಳ ಕಾಲ ನಡೆಯಲಿದ್ದು, ಪ್ರತಿ ತಂಡದಲ್ಲಿ 40 ರಿಂದ 50 ಶಿಕ್ಷಕರು ಭಾಗವಹಿಸಲಿದ್ದಾರೆ. ತಾಲೂಕು ಮಟ್ಟದ ತರಬೇತಿಯು ಏ.6 ರಿಂದ ತಾಲೂಕು ಹಂತದಲ್ಲಿ ನಡೆಯಲಿದ್ದು, 50 ಶಿಕ್ಷಕರ ಬ್ಯಾಚ್‌ನಂತೆ ನಡೆಯಲಿದೆ.

ಎಲ್ಲೆಲ್ಲಿ ದ್ವಿಭಾಷಾ ಶಾಲೆಗಳು?

ಬೆಂಗಳೂರು ಉತ್ತರ, ದಕ್ಷಿಣ, ಗ್ರಾಮಾಂತರ, ರಾಮನಗರ, ಹಾವೇರಿ, ಕಲಬುರಗಿ, ಶಿವಮೊಗ್ಗ, ಹಾಸನ, ತುಮಕೂರು, ದಕ್ಷಿಣ ಕನ್ನಡ, ಕೋಲಾರ, ಧಾರವಾಡ, ಬಾಗಲಕೋಟೆ, ವಿಜಯಪುರ ಮತ್ತು ಕೊಪ್ಪಳ ಸೇರಿದಂತೆ ಒಟ್ಟು 15 ಜಿಲ್ಲೆಗಳಲ್ಲಿ ಹಾಗೆಯೇ ಗಣಿ ಬಾಧಿತ ತಾಲೂಕುಗಳಾದ ಚಿತ್ರದುರ್ಗ, ಹೊಳಲ್ಕೆರೆ, ಮೊಣಕಾಲ್ಮುರು, ಹೊಸದುರ್ಗ, ಚಿಕ್ಕನಾಯಕನಹಳ್ಳಿ, ಗುಬ್ಬಿ, ತಿಪಟೂರು, ಬಳ್ಳಾರಿ (ಪಶ್ಚಿಮ), ಸಂಡೂರು ಮತ್ತು ಹೊಸ ಪೇಟೆ ತಾಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ಕ್ರಮ ಜಾರಿಗೆ ಬರಲಿದೆ.
ಈ ತರಬೇತಿ ಪ್ರಕ್ರಿಯೆಯನ್ನು ಆಯಾ ಜಿಲ್ಲೆಯ ಡಯಟ್ ಪ್ರಾಂಶುಪಾಲರು ಮತ್ತು ನೋಡಲ್ ಅಧಿಕಾರಿಗಳು ಉಸ್ತುವಾರಿ ವಹಿಸಲಿದ್ದಾರೆ. ಶಿಕ್ಷಕರು ದ್ವಿಭಾಷಾ ಮಾಧ್ಯಮದಲ್ಲಿ ಬೋಧಿಸಲು ಅಗತ್ಯವಿರುವ ಕೌಶಲಗಳನ್ನು ಪಡೆಯುವಂತೆ ನೋಡಿಕೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net