ವಿಶೇಷ ಸಮಗ್ರ ಮತಪಟ್ಟಿ ಪರಿಷ್ಕರಣೆಗೆ ಸಿದ್ಧತೆ / HOSAKOTE

ಹೊಸಕೋಟೆ ತಾಲೂಕು ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ತಾಲೂಕು ಮತದಾರರ ನೋಂದಣಾಧಿಕಾರಿ ಶಿವಕುಮಾರ್​ ಮಾತನಾಡಿದರು. ತಹಸೀಲ್ದಾರ್​ ಟಿ.ಎಸ್​.ಶೀತಲ್​, ತಾಪಂ ಇಒ ಮುನಿಯಪ್ಪ, ಬಿಇಒಪದ್ಮನಾಭ ಇದ್ದರು.
ಹೊಸಕೋಟೆ ತಾಲೂಕು ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ತಾಲೂಕು ಮತದಾರರ ನೋಂದಣಾಧಿಕಾರಿ ಶಿವಕುಮಾರ್​ ಮಾತನಾಡಿದರು. ತಹಸೀಲ್ದಾರ್​ ಟಿ.ಎಸ್​.ಶೀತಲ್​, ತಾಪಂ ಇಒ ಮುನಿಯಪ್ಪ, ಬಿಇಒಪದ್ಮನಾಭ ಇದ್ದರು.
Published on
ಹೊಸಕೋಟೆ : ಭಾರತೀಯ ಚುನಾವಣಾಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯನ್ನು ತಾಲೂಕಿನಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ತಾಲೂಕು ಮತದಾರರ ನೋಂದಣಾಧಿಕಾರಿ ಶಿವಕುಮಾರ್​ ಮನವಿ ಮಾಡಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಮುಖ ಉದ್ದೇಶ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದು ಹಾಗೂ ಅನರ್ಹರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕುವುದಾಗಿದೆ. 18 ವರ್ಷ ಪೂರ್ಣಗೊಳಿಸಿರುವ ಅರ್ಹರನ್ನು ಮತಪಟ್ಟಿಗೆ ಸೇರ್ಪಡೆಗೊಳಿಸಲಾಗುವುದು. ಮರಣ ಹೊಂದಿರುವವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ವಿವಾಹದ ನಂತರ ಬೇರೆ ಕ್ಷೇತ್ರಕ್ಕೆ ತೆರಳಿರುವವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವ ನಕಲಿ ಮತದಾರರ ಹೆಸರನ್ನು ಪರಿಶೀಲನೆಯ ನಂತರ ಪಟ್ಟಿಯಿಂದ ತೆಗೆದುಹಾಕಲಾಗುವುದು ಎಂದು ಹೇಳಿದರು.
ತಹಸೀಲ್ದಾರ್​ ಟಿ.ಎಸ್​.ಶೀತಲ್​ ಮಾತನಾಡಿ, ಹಲವು ವರ್ಷಗಳಿಂದ ಸಮಗ್ರ ಮತಪಟ್ಟಿ ಪರಿಷ್ಕರಣೆ ನಡೆಯದ ಹಿನ್ನೆಲೆಯಲ್ಲಿ ಚುನಾವಣೆ ಆಯೋಗವು ಈ ಬಾರಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮ ಕೈಗೊಂಡಿದೆ. ಮತದಾರರ ಪಟ್ಟಿಯ ನಕಲಿ ಹೆಸರುಗಳು, ಅನಗತ್ಯ ಸೇರ್ಪಡೆಹಾಗೂ ಸ್ಥಳಾಂತರಗೊಂಡ ಮತದಾರರ ವಿವರಗಳನ್ನು ಗುರುತಿಸಿ ಸರಿಪಡಿಸುವ ಉದ್ದೇಶದಿಂದ ಈ ಪ್ರಕ್ರಿಯೆ ಜಾರಿಗೊಳಿಸಲಾಗಿದೆ. ಹೊಸಕೋಟೆ ಕ್ಷೇತ್ರದಲ್ಲಿ ಒಟ್ಟು 2,46,143 ಮತದಾರರಿದ್ದು, 293 ಮತಗಟ್ಟೆಗಳು ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ 244 ಗ್ರಾಮೀಣ ಹಾಗೂ 49 ನಗರ ಮತಗಟ್ಟೆಗಳು ಸೇರಿವೆ. ಇದುವರೆಗೆ 2,21,500ಕ್ಕೂ ಹೆಚ್ಚು ಮತದಾರರ ಮ್ಯಾಪಿಂಗ್​ ಕಾರ್ಯ ಪೂರ್ಣಗೊಂಡಿದ್ದು, ಉಳಿದ ಮತದಾರರ ಮಾಹಿತಿಯನ್ನು ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ನಗರಸಭೆ ಪೌರಾಯುಕ್ತ ನೀಲಲೋಚನ ಪ್ರಭು ಮಾತನಾಡಿ, ನಗರ ಪ್ರದೇಶಗಳಲ್ಲಿ ಜನರ ಸ್ಥಳಾಂತರ ಪ್ರಮಾಣ ಹೆಚ್ಚಿರುವುದರಿಂದ ಕೆಲಮತದಾರರ ಮ್ಯಾಪಿಂಗ್​ ಬಾಕಿಯಿದೆ. ಜೂ. 19ರೊಳಗೆ ಮ್ಯಾಪಿಂಗ್​ ಪೂರ್ಣಗೊಳ್ಳಲಿದ್ದು, 20ರಂದು ವಿಶೇಷ ಸಮಗ್ರ ಮತಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. 29ರವರೆಗೆ ಬೂತ್​ ಮಟ್ಟದ ಅಧಿಕಾರಿಗಳಿಗೆ ವಿಶೇಷ ತರಬೇತಿ ನೀಡಲಾಗುವುದು. 30ರಿಂದ ಜು. 29ರವರೆಗೆ ಬಿಎಲ್​ಒಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಣೆ ಮಾಡುವರು. ಇದೇ ಅವಧಿಯಲ್ಲಿ ಮತಗಟ್ಟೆಗಳ ಮರುಹೊಂದಾಣಿಕೆ ಕಾರ್ಯವೂ ನಡೆಯಲಿದ್ದು, ಮತದಾರರ ಸಂಖ್ಯೆ ಹಾಗೂ ಭೌಗೋಳಿಕ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಬದಲಾವಣೆಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಪು$್ಪ ಮಾಹಿತಿ ನೀಡಿದರೆ ಕ್ರಮ : ಯಾವುದೇ ಮತದಾರರ ಹೆಸರನ್ನು ಸಮರ್ಪಕ ಪರಿಶೀಲನೆ ಹಾಗೂ ಅವಕಾಶ ನೀಡದೆ ಪಟ್ಟಿಯಿಂದ ತೆಗೆದುಹಾಕುವುದಿಲ್ಲ. ಆಕ್ಷೇಪಣೆಗಳಿದ್ದಲ್ಲಿ ಜನಪ್ರತಿನಿಧಿತ್ವ ಕಾಯ್ದೆಯಡಿ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದು, ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನೀಡಿದಲ್ಲಿ ಕ್ರಮ ಲೈಗೊಳ್ಳಲಾಗುವುದು ಎಂದು ತಹಸೀಲ್ದಾರ್​ ಟಿ.ಎಸ್​.ಶೀತಲ್​ ಎಚ್ಚರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net