5 ಸಾವಿರಕ್ಕೂ ಹೆಚ್ಚು ನಿವೇಶನ ಹಂಚಲು ಸಿದ್ಧತೆ

ಪಾಂಡವಪುರ ಪಟ್ಟಣದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಕಾರ್ಯಕ್ರಮವನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಉದ್ಘಾಟಿಸಿದರು. ತಾಪಂ ಇಒ ವೀಣಾ, ಟಿಎಚ್‌ಒ ಡಾ.ಸಿ.ಎ.ಅರವಿಂದ್ ಇದ್ದರು.
ಪಾಂಡವಪುರ ಪಟ್ಟಣದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಕಾರ್ಯಕ್ರಮವನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಉದ್ಘಾಟಿಸಿದರು. ತಾಪಂ ಇಒ ವೀಣಾ, ಟಿಎಚ್‌ಒ ಡಾ.ಸಿ.ಎ.ಅರವಿಂದ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ದರ್ಶನ್ ಪುಟ್ಟಣ್ಣಯ್ಯ
  • ತೋಟಗಾರಿಕೆ ಇಲಾಖೆ ಪಕ್ಕ
ಪಾಂಡವಪುರ: ಪ್ರಜಾಸೇವಾ ಕಾರ್ಯಕ್ರಮದಲ್ಲಿ ಸ್ವೀಕಾರವಾಗುವ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ಒದಗಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಪಡಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೂಚನೆ ನೀಡಿದರು.
ಪಟ್ಟಣದ ತೋಟಗಾರಿಕೆ ಇಲಾಖೆ ಪಕ್ಕದಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಪ್ರಜಾಸೇವಾ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಸೇವೆಗಳು ಮನೆ ಬಾಗಿಲಿಗೆ ಎಂಬ ಕಾರ್ಯಕ್ರಮದಡಿ ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಲವು ಪಂಚಾಯಿತಿ ಮಟ್ಟದಲ್ಲಿ ನಾವು ಈಗಾಗಲೇ ಸಾರ್ವಜನಿಕರ ಸಮಸ್ಯೆ ಆಲಿಸಿ ಅದಕ್ಕೆ ಪರಿಹಾರ ಒದಗಿಸುವ ಕೆಲಸ ಮಾಡಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಜಾಸೇವೆ ಎಂಬ ಪ್ರತೇಕ ಇಲಾಖೆ ಮೂಲಕ ಸರ್ಕಾರಿ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ತಾಲೂಕಿನಲ್ಲಿ 5 ಸಾವಿರಕ್ಕೂ ಹೆಚ್ಚು ನಿವೇಶನ ಹಂಚಿಕೆ ಮಾಡಿ ಹಕ್ಕುಪತ್ರ ನೀಡಲು ಕ್ರಮ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಪ್ರತಿಯೊಬ್ಬ ಬಡವ ನಿವೇಶನ ಹೊಂದುವಂತಾಗಬೇಕು. ಈ ಸಂಬಂಧ ಹೆಚ್ಚಿನ ಗಮನ ಹರಿಸಿ ಕೆಲಸ ಮಾಡಲಾಗುತ್ತಿದೆ. ಸಾವಯವ ಕೃಷಿಯಿಂದ ರೈತರಿಗೆ ದುಪ್ಪಟ್ಟು ಲಾಭ ಸಿಗಲಿದೆ. ಸಾವಯವ ಕೃಷಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ರೈತರು ಸಾವಯವ ಕೃಷಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಉಪವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್ ಮಾತನಾಡಿ, ಅಧಿಕಾರಿಗಳು ಎಷ್ಟೇ ಕೆಲಸ ಮಾಡಿದರೂ ಅಪಾದನೆ ಬಂದೇ ಬರುತ್ತದೆ. ನಾನು ಸಂವಿಧಾನದ ಆಶಯದಂತೆ ಪ್ರಾಮಣಿಕವಾಗಿ ಶಕ್ತಿಮೀರಿ ಕೆಲಸ ಮಾಡುತ್ತಿದ್ದೇನೆ. ಪೌತಿ ಖಾತೆ ಮಾಡುವುದರಲ್ಲಿ ಮಂಡ್ಯ ಜಿಲ್ಲೆ ರಾಜ್ಯದಲ್ಲೇ ಪ್ರಥಮವಾಗಿದೆ. ಪಾಂಡವಪುರ ಉಪವಿಭಾಗ ಜಿಲ್ಲೆಗೆ ಪ್ರಥಮವಾಗಿದೆ. ಇಡೀ ಜಿಲ್ಲೆಯಲ್ಲಿ 65 ಸಾವಿರ ಪೌತಿ ಖಾತೆಗಳನ್ನು ಮಾಡಿಕೊಡಲಾಗಿದೆ. ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಬಾಕಿ ಇದ್ದ 2500 ಪ್ರಕರಣಗಳನ್ನೂ ಇತ್ಯಾರ್ಥ ಪಡಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಪಂ ಇಒ ವೀಣಾ, ಟಿಎಚ್‌ಒ ಡಾ.ಸಿ.ಎ.ಅರವಿಂದ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net