ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ವ್ಯಸನಮುಕ್ತ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಪೂರ್ವಭಾವಿ ಸಭೆ

,
,
Published on

ಪ್ರಮುಖ ಮುಖ್ಯಾಂಶಗಳು

  • ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ನೇತೃತ್ವದಲ್ಲಿ ಸಭೆ
ಕಲಬುರಗಿ: ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಶ್ರೀ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ "ವ್ಯಸನಮುಕ್ತ ದಿನಾಚರಣೆ"ಯನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಚರಿಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್‌ 1ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಆದರ್ಶ ನಗರದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಶ್ರೀ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.
ಕಾರ್ಯಕ್ರಮಕ್ಕೆ ನಿಯೋಜಿಸಲಾದ ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು ಹಾಗೂ ಉಪಹಾರದ ಸಮರ್ಪಕ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆ ಹಾಗೂ ತಾಲೂಕು ಮಟ್ಟದ ಎಲ್ಲ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ಅಂದು ಬೆಳಿಗ್ಗೆ 9 ಗಂಟೆಗೆ ಕಡ್ಡಾಯವಾಗಿ ಶ್ರೀ ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯನ್ನು ಆಚರಿಸುವಂತೆ ಸೂಚಿಸಲಾಯಿತು.
ವಿದ್ಯಾರ್ಥಿಗಳಲ್ಲಿ ವ್ಯಸನದ ದುಷ್ಪರಿಣಾಮಗಳು ಹಾಗೂ ಶ್ರೀ ಮಹಾಂತ ಶಿವಯೋಗಿಗಳ ತತ್ವಗಳು ಮತ್ತು ಆದರ್ಶಗಳ ಕುರಿತು ಅರಿವು ಮೂಡಿಸಲು 15ರಿಂದ 20 ನಿಮಿಷಗಳ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ವೇದಿಕೆ ಅಲಂಕಾರದ ಜವಾಬ್ದಾರಿಯನ್ನು ತೋಟಗಾರಿಕೆ ಇಲಾಖೆಗೆ ಹಾಗೂ ಅಗತ್ಯ ವೈದ್ಯಕೀಯ ಮತ್ತು ಇತರೆ ಸಹಕಾರವನ್ನು ಆರೋಗ್ಯ ಇಲಾಖೆಗೆ ವಹಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ಮಾತನಾಡಿ, ಪ್ರೋಟೋಕಾಲ್‌ಗೆ ಅನುಗುಣವಾಗಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಮುದ್ರಿಸಿ ವಿತರಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಜೀಂ ಪಾಶಾ, ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿಗಳಾದ ರೇವಣಸಿದ್ದಪ್ಪ ಕೆ.ಗೌಡರ, ಚನ್ನಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಇಕ್ಬಾಲ್ ಮಹಾಗಾವಿ, ಆರೋಗ್ಯ ಇಲಾಖೆಯ ನಾಗರಾಜ ಬಿರಾದಾರ, ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕ ಮೊಹಮ್ಮದ್ ಇರ್ಫಾನ್, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ ಗೋನಾಯಕ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧೀಕ್ಷಕ ಆಕಾಶದೀಪ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ತಹಶೀಲ್ದಾರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net