ಅಪರ ಜಿಲ್ಲಾಧಿಕಾರಿಗಳು ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಡಾ.ರಾಜಕುಮಾರ್ ಅವರ ಜನ್ಮದಿನಾಚರಣೆ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯ ಸಮಸ್ತ ಕನ್ನಡಪರ ಸಂಘಟನೆಗಳು, ಸಂಘ-ಸಂಸ್ಥೆಗಳು, ಸಾರ್ವಜನಿಕರು, ರಾಜ್ ಅಭಿಮಾನಿಗಳು ಸಭೆಗೆ ಆಗಮಿಸಿ ಅಗತ್ಯ ಸಲಹೆಗಳನ್ನು ನೀಡುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ಅವರು ಮನವಿ ಮಾಡಿದ್ದಾರೆ