ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜಯಂತಿ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ರವರ್ 119 ನೇ ಜಯಂತಿ ಪೂರ್ವಭಾವಿ ಸಭೆ

,
,
Published on
ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜಯಂತಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ರವರ್ 119 ನೇ ಜಯಂತಿ ಏಪ್ರಿಲ್ 5 ರಂದು ಹಾಗೂ ಏಪ್ರಿಲ್ 14 ರಂದು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರಾದ ಅವಿನಾಶ ಶಿಂಧೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರದಂದು ಮಹಾನಗರಪಾಲಿಕೆ ಸಭಾಂಗಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಮ್ ಅವರ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಧಿಕಾರಿಗಳು ತಮಗೆ ನೀಡಿದ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಸೂಚಿಸಿದರು.
ಏಪ್ರಿಲ್ 5 ರಂದು ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ರವರ ಮಹಾನಗರ ಪಾಲಿಕೆಯ ಆವರಣದಲ್ಲಿರುವ ಮಹನೀಯರ ಪ್ರತಿಮೆಗಳಿಗೆ ಗೌರವ ನಮನ ಸಲ್ಲಿಸುವುದು. ವಿಶೇಷ ಉಪನ್ಯಾಸ ಈ ಮಹಾನ್ ನಾಯಕರ ಜೀವನ ಮತ್ತು ಸಮಾಜಕ್ಕೆ ಅವರು ನೀಡಿದ ಕೊಡುಗೆಗಳ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗುವುದು. ಅದೇ ರೀತಿಯಾಗಿ ಜಗತ್ ಸರ್ಕಲ್‌ನಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ನಗರದ ಪ್ರಮುಖ ವೃತ್ತಗಳಲ್ಲಿರುವ ಡಾ. ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ. ಭವ್ಯ ಮೆರವಣಿಗೆ ವಿವಿಧ ಕಲಾತಂಡಗಳು ಮತ್ತು ಜಾನಪದ ಮೇಳಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಭಾವಚಿತ್ರಗಳ ಮೆರವಣಿಗೆ. ಸ್ವಚ್ಛತೆ ಮತ್ತು ದೀಪಾಲಂಕಾರ ಪಾಲಿಕೆಯ ವತಿಯಿಂದ ನಗರದ ಪ್ರಮುಖ ವೃತ್ತಗಳು ವಿದ್ಯುತ್ ದೀಪಾಲಂಕಾರ ಮಾಡುವುದು ಹಾಗೂ ಮೆರವಣಿಗೆ ಸಾಗುವ ಹಾದಿಯಲ್ಲಿ ವಿಶೇಷ ಸ್ವಚ್ಛತಾ ಕಾರ್ಯ ಕೈಗೊಳ್ಳುವುದು.
ಸಾರ್ವಜನಿಕರಿಗೆ ಪಾಲಿಕೆಯ ವತಿಯಿಂದ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು ಸಮಾಜ ಮುಖಂಡರು ತಮ್ಮ ಸಲಹೆ ಸೂಚನೆಗಳು ನೀಡಿದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಜಿಲ್ಲಾಮಟ್ಟದ ಅಧಿಕಾರಿಗಳು ಸಮಾಜದ ಮುಖಂಡರುಗಳಾದ ಅಶೋಕ ವೀರನಾಯಕ್, ಶ್ರೀನಿವಾಸ, ಮಲ್ಲಿಕಾರ್ಜುನ ದೊಡಪ್ಪ, ಶ್ಯಾಮನಾಟೇಕರ್, ಲಿಂಗರಾಜ್, ರಾಜು ವಾಡೇಕರ್, ಗುಂಡೇಶ, ದತ್ತು ಬಾಸಗಿ, ಗೋಪಾಲ ಕಟ್ಟಿ, ಅಧಿಕಾರಿಗಳು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net