ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಲಭ್ಯಗಳೊಂದಿಗೆ ಉಚಿತ ಪಠ್ಯಪುಸ್ತಕ, ಉತ್ತಮ ಗುಣಮಟ್ಟದ ಶೂ ಹಾಗೂ ಸಾಕ್ಸ್‌ಗಳನ್ನು ನೀಡಲಾಗುತ್ತಿದೆ. ಈ ವರ್ಷದಿಂದ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷೆ ಕಲಿಕೆ ಪ್ರಾರಂಭಿಸಲಾಗುತ್ತಿದೆ. ಪ್ರತಿಷ್ಠಿತ ಕೆಜಿಎಸ್, ಪಿಎಂಶ್ರೀ, ಆದರ್ಶ ವಿದ್ಯಾಲಯ ಹಾಗೂ ಕೆಜಿಬಿವಿಗಳಂತಹ ಮಾದರಿ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ತಮ್ಮ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಮಾಡಲಾಗುತ್ತಿದೆ. ರಾಗಿ ಮಾಲ್ಟ, ಸಕ್ಕರೆ ಮಿಶ್ರಿತ ಹಾಲು, ರುಚಿ ಕಟ್ಟಾದ ಮಧ್ಯಾಹ್ನ ದ ಬಿಸಿಊಟ, ಮೊಟ್ಟೆ, ಬಾಳೆಹಣ್ಣುಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.