ರಸಗೊಬ್ಬರ ಅಕ್ರಮ ಮಾರಾಟ ತಡೆಯಿರಿ

illegal sale
illegal sale
Published on
ಚಿಕ್ಕೋಡಿ: ಜಿಲ್ಲೆಯಾದ್ಯಂತ ನಡೆಯುತ್ತಿರುವ ಅಕ್ರಮ ರಸಗೊಬ್ಬರ ಮಾರಾ ಟಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಕಾರ್ಯಕರ್ತರು ಮಂಗಳವಾರ ಇಲ್ಲಿನ ಸಹಾಯಕ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಮುಂಗಾರು ಆರಂಭವಾಗಿದೆ. ಆದರೆ, ರೈತರಿಗೆ ಸಮರ್ಪಕ ರಸಗೊಬ್ಬರ ಸಿಗುತ್ತಿಲ್ಲ.
ಕೆಲವು ಕಡೆ ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತದೆ. ರಸಗೊಬ್ಬರ ಕಾಳ ಸಂತೆಯಲ್ಲಿಯೂ ಲಭ್ಯವಿದೆ. ಈ ಬಗ್ಗೆ ಸಂಬಂಧಿಸಿದವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಪರವಾನಗಿ ಇಲ್ಲದೆ, ಅಕ್ರಮವಾಗಿ ರಸಗೊಬ್ಬರ ಮಾರಾಟ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.
ಸುರೇಶ ಸೌದಾಗರ, ಹನುಮಂತ ಗಾಡಿವಡ್ಡರ, ವಿನೋದ ಪಾಟೀಲ, ಸಿದ್ದು ಬನಸೊಡೆ, ಕುಮಾರ ಡೊಂಗರೆ, ಸತೀಶ ಪೂಜಾರಿ, ಸಿದ್ದು ಡಾಂಗೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net