ಚಿತ್ರದುರ್ಗ ಅಪಘಾತದಲ್ಲಿ 5ಕ್ಕೂ ಹೆಚ್ಚು ಮಂದಿ ಸಜೀವ ದಹನ: ಸಂತಾಪ ಸೂಚಿಸಿ 2ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.. chitradurga bus accident

chitradurga bus accident
chitradurga bus accident
Published on
ಚಿತ್ರದುರ್ಗ: ಇಂದು (ಡಿ.25) ಬೆಳಗಿನ ಜಾವ ಸುಮಾರು 2 ಗಂಟೆ ಸುಮಾರಿಗೆ ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸುಮಾರು 5ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದರೆ. ಹಿರಿಯೂರು ತಾಲೂಕಿನ ಜವನಗೊಂಡನ ಹಳ್ಳಿ ಎಚ್​ಪಿ ಪೆಟ್ರೋಲ್ ಬಂಕ್ ಬಳಿ ಈ ಅಪಘಾತ ಸಂಭವಿಸಿದೆ. ( chitradurga bus accident) ಈ ಕುರಿತಾಗಿ ಪ್ರಧಾನಿ ಮೋದಿ ಅವರು ಟ್ವೀಟ್​​ ಮಾಡಿ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರಿಂದ ಗೋಕರ್ಣ ಕಡೆ ಧಾವಿಸುತ್ತಿದ್ದ ಸೀ ಬಡ್ ಖಾಸಗಿ ಬಸ್​​​ಗೆ ಚಿತ್ರದುರ್ಗದಿಂದ ಬೆಂಗಳೂರಿಗೆ ಕಡೆಗೆ ಧಾವಿಸುತ್ತಿ ಕಂಟೈನರ್ ಡಿವೈಡರ್ ಹಾರಿ ಬಂದು ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ.
ಸಂತಾಪ ಸೂಚಿಸಿದ ಮೋದಿ:
ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ.
ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್‌)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi

ಬಸ್​​ ಸುಟ್ಟು ಭಸ್ಮ: 5ಕ್ಕೂ ಹೆಚ್ಚು ಮಂದಿ ಸಜೀವ ದಹನ

ಲಾರಿ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿವೈಡರ್ ದಾಟಿ ಬಂದು ಬಸ್ಸಿಗೆ ಡಿಕ್ಕಿಯಾಗಿದೆ. ಬಸ್ಸಿನ ಡೀಸೆಲ್ ಟ್ಯಾಂಕಿಗೆ ಲಾರಿ ಡಿಕ್ಕಿಯಾದ ಪರಿಣಾಮ ತಕ್ಷಣ ಬೆಂಕಿ ಹೊತ್ತಿಕೊಂಡಿದೆ. ಡಿಕ್ಕಿಯಾದ ಲಾರಿ ಚಾಲಕ ಕೂಡಾ ಮೃತಪಟ್ಟಿದ್ದಾನೆ.
ಬಸ್ಸಿನಲ್ಲಿ ಚಾಲಕ, ನಿರ್ವಾಹಕ ಸೇರಿ 32 ಜನ ಪ್ರಯಾಣಿಸುತ್ತಿದ್ದರು. ಪ್ರಯಾಣಿಕರ 5 ಶವ ಗಳು ಪತ್ತೆ ಆಗಿವೆ. ಬಸ್ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಉಳಿದವರು ಬಸ್ಸಿನಿಂದ ಜಿಗಿದು ಪಾರಾಗಿದ್ದು ಹಿರಿಯೂರು, ಶಿರಾ, ತುಮಕೂರು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎನ್ನವ ಮಾಹಿತಿ ಲಭ್ಯವಾಗಿದೆ.
ಸುಟ್ಟು ಹೋದ ಬಸ್ಸಿನ ಹಿಂದೆಯ ಬೆಂಗಳೂರಿನ ದಾಸರಹಳ್ಳಿ ಖಾಸಗಿ ಶಾಲೆಯ ಮಕ್ಕಳು ದಾಂಡೆಲಿಗೆ ಪ್ರವಾಸ ತೆರಳುತ್ತಿದ್ದರು. ಮಕ್ಕಳು ಪ್ರಯಾಣಿಸುತ್ತಿದ್ದ ಬಸ್ಸಿನ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ಪಕ್ಕದ ಕಂದಕ ದಾಟಿ ಸರ್ವೀಸ್ ರಸ್ತೆಗೆ ಹೋಗಿದ್ದು ದುರಂತದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ದಾವಣಗೆರೆ ಪೂರ್ವ ವಲಯ ಐಜಿಪಿ ರವಿಕಾಂತೇಗೌಡ, ಎಸ್ಪಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net