ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡಿ / DODABALLAPUR

ದೊಡ್ಡಬಳ್ಳಾಪುರದ ಕೆಸ್ತೂರು ಗ್ರಾಪಂನಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಧೀರಜ್​ ಮುನಿರಾಜು, ತಾಪಂ ಇಒ ಮಂಜುನಾಥ್​ ಹರ್ತಿ, ಮಾಜಿ ಅಧ್ಯಕ್ಷ ರಮೇಶ್​, ಮುಖಂಡರಾದ ಅಶ್ವತ್ಥ ನಾರಾಯಣ, ಕೃಷ್ಣಪ್ಪ ಇದ್ದರು.
ದೊಡ್ಡಬಳ್ಳಾಪುರದ ಕೆಸ್ತೂರು ಗ್ರಾಪಂನಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಧೀರಜ್​ ಮುನಿರಾಜು, ತಾಪಂ ಇಒ ಮಂಜುನಾಥ್​ ಹರ್ತಿ, ಮಾಜಿ ಅಧ್ಯಕ್ಷ ರಮೇಶ್​, ಮುಖಂಡರಾದ ಅಶ್ವತ್ಥ ನಾರಾಯಣ, ಕೃಷ್ಣಪ್ಪ ಇದ್ದರು.
Published on
ದೊಡ್ಡಬಳ್ಳಾಪುರ : ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಹಳ್ಳಿಗಳಲ್ಲಿ ಜನರಿಗೆ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿ ಮೂಲ ಸೌಕರ್ಯ ಕಲ್ಪಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಧೀರಜ್​ ಮುನಿರಾಜು ತಿಳಿಸಿದರು.
ತಾಲೂಕಿನ ಕೆಸ್ತೂರು ಗ್ರಾಪಂನಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲೂ ಮುಂಗಾರು ಆರಂಭವಾಗುವ ಹಿನ್ನೆಲೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿಯೊಂದು ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿ ಮೂಲ ಸೌಲಭ್ಯ ಒದಗಿಸಬೇಕು. ರ್ನಿಲಕ್ಷ$್ಯ ಮಾಡದೆ ಜನರ ಸಮಸ್ಯೆಗೆ ಶೀಘ್ರ ಅಧಿಕಾರಿಗಳು ಕ್ರಮವಹಿಸಬೇಕು. ಎಲ್ಲ ಗ್ರಾಪಂಗಳಲ್ಲೂ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಯಲ್ಲಿ ಲಭ್ಯವಾಗಿ ಜನರ ಸಮಸ್ಯೆ ಆಲಿಸಿ, ಬಗೆಹರಿಸಬೇಕು ಎಂದರು. ಪ್ರತಿ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಕಾಲಕಾಲಕ್ಕೆ ಸರಿಯಾಗಿ ಚರಂಡಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಗ್ರಾಪಂ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಗದಿತವಾಗಿ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ವಿಚಾರಿಸಬೇಕು ಎಂದು ತಿಳಿಸಿದರು.
ಮುಂಗಾರಿಗೆ ಸಜ್ಜಾಗಿ: ತಾಲೂಕಿನಾದ್ಯಂತ ಮುಂಗಾರು ಆರಂಭವಾಗುತ್ತಿದೆ. ಈ ಸಮಯದಲ್ಲಿ ಡೆಂ, ಮಲೇರಿಯಾದಂತಹ ರೋಗಗಳು ಹರಡುವ ಸಾಧ್ಯತೆಯಿದ್ದು, ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರಿಕೆ ವಹಿಸಬೇಕು. ಜನರಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಬೇಕು. ಮಳೆ ಬಂದಾಗ ನೀರು ಸಮರ್ಪಕವಾಗಿ ಹರಿದು ಹೋಗುವಂತೆ ಚರಂಡಿಗಳ ಸ್ವಚ್ಚತೆ ಮಾಡಿ, ಅದರಲ್ಲಿ ಗಿಡಗಳನ್ನು ತೆರವು ಮಾಡಬೇಕು. ಮುಂಗಾರಿನ ಸಮಯದಲ್ಲಿ ಯಾವುದೇ ಸಮಸ್ಯೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net