

ಪ್ರಮುಖ ಮುಖ್ಯಾಂಶಗಳು
ಹುಮನಾಬಾದ್: ಹುಮನಾಬಾದ್ ಮತಕ್ಷೇತ್ರದ ರೈಲ್ವೆ ಹಾಗೂ ಜಲಶಕ್ತಿ ಇಲಾಖೆಗೆ ಸಂಬಂಧಿಸಿದ ವಿವಿಧ ಅಗತ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಿ ಅಗತ್ಯ ಅನುದಾನ ಹಾಗೂ ಅನುಮೋದನೆ ನೀಡುವಂತೆ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ನವದೆಹಲಿಯಲ್ಲಿ ಸೋಮವಾರ ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದರು. ಕ್ಷೇತ್ರದ ಜನರ ಅಗತ್ಯತೆಗಳು ಹಾಗೂ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕೈಗೊಳ್ಳಬೇಕಾದ ವಿವಿಧ ಕಾಮಗಾರಿಗಳ ಕುರಿತು ಸಚಿವರ ಗಮನಕ್ಕೆ ತಂದು, ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ನೆರವು ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಶಾಸಕರಾದ ಪ್ರಭು ಚವ್ಹಾಣ್, ಡಾ.ಶೈಲೇಂದ್ರ ಬೆಲ್ದಾಳೆ, ಶರಣು ಸಲಗರ, ವಿಧಾನ ಪರಿಷತ್ ಮಾಜಿ ಸಭಾಪತಿ ರಘುನಾಥರಾವ ಮಲ್ಕಾಪುರೆ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಅಂಬೇಡ್ಕರ್ ಅಭಿವೃದ್ಧಿ ನಿಗಮ ಮಂಡಳಿಯ ಮಾಜಿ ನಿರ್ದೇಶಕ ಬಸವರಾಜ ಆರ್ಯ, ಈಶ್ವರಸಿಂಗ್ ಠಾಕೂರ್, ಬಾಬು ವಾಲಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ ಪಾಟೀಲ್ ಇದ್ದರು.