ತಾಯಿ-ಶಿಶುಗಳ ಆರೋಗ್ಯಕ್ಕೆ ಆದ್ಯತೆ

ಅರೇಹಳ್ಳಿ ರೋಟರಿ ಸಂಸ್ಥೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಪೌಷ್ಟಿಕಾಂಶವುಳ್ಳ ಪ್ರೊಟೀನ್ ಕಿಟ್‌ಗಳನ್ನು ವಿತರಿಸಲಾಯಿತು.
ಅರೇಹಳ್ಳಿ ರೋಟರಿ ಸಂಸ್ಥೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಪೌಷ್ಟಿಕಾಂಶವುಳ್ಳ ಪ್ರೊಟೀನ್ ಕಿಟ್‌ಗಳನ್ನು ವಿತರಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಅರೇಹಳ್ಳಿ ರೋಟರಿ ಸಂಸ್ಥೆ
  • ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ

ಬೇಲೂರು: ತಾಲೂಕಿನ ಅರೇಹಳ್ಳಿ ರೋಟರಿ ಸಂಸ್ಥೆಯಿಂದ ರೋಟರಿಯ ಚೈಲ್ಡ್ ಆ್ಯಂಡ್ ಮೆಟರ್ನಲ್ ಹೆಲ್ತ್ ತಿಂಗಳ ಅಂಗವಾಗಿ ಅರೇಹಳ್ಳಿ ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ 25 ತಾಯಂದಿರು ಹಾಗೂ ಗರ್ಭಿಣಿಯರಿಗೆ ಪೌಷ್ಟಿಕಾಂಶಯುಕ್ತ ಪ್ರೊಟೀನ್ ಕಿಟ್‌ಗಳನ್ನು ಇತ್ತೀಚೆಗೆ ವಿತರಿಸಲಾಯಿತು.

ಅರೇಹಳ್ಳಿ ರೋಟರಿ ಸಂಸ್ಥೆ ಅಧ್ಯಕ್ಷ ಮಹಂತ್ ನಾರ್ವೆ ಮಾತನಾಡಿ, ಮೊದಲು ತಾಯಿ ಆರೋಗ್ಯವಾಗಿದ್ದರೆ ಮಗೂ ಸಹ ಆರೋಗ್ಯವಾಗಿರುತ್ತದೆ. ತಾಯಿ ಮತ್ತು ಮಗುವಿನ ಆರೋಗ್ಯದತ್ತ ಗಮನಹರಿಸುವುದು ಮಗುವಿನ ಉತ್ತಮ ಭವಿಷ್ಯಕ್ಕೆ ದಾರಿಯಾಗುತ್ತದೆ. ಆದ್ದರಿಂದ ತಾಯಂದಿರಲ್ಲಿ ಪೌಷ್ಟಿಕತೆಯ ಮಹತ್ವದ ಕುರಿತು ಅರಿವು ಮೂಡಿಸುವುದು ಹಾಗೂ ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡುವ ಉದ್ದೇಶದಿಂದ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಲ್ಲದೆ ಸಮುದಾಯದ ಆರೋಗ್ಯ ಮತ್ತು ಕಲ್ಯಾಣಕ್ಕಾಗಿ ಅರೇಹಳ್ಳಿ ರೋಟರಿ ಸಂಸ್ಥೆ ನಿರಂತರವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ತಾಯಿ ಮತ್ತು ಶಿಶುಗಳ ಆರೋಗ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.
ರೋಟರಿ ಸಂಸ್ಥೆ ಕಾರ್ಯದರ್ಶಿ ಎಂ.ಎಸ್.ವಿಜಯ್, ಮಕ್ಕಳ ತಜ್ಞೆ ಡಾ.ಅನುಪಮಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net