ವಚನ ಮಂಟಪ ಅಧಿಕಾರಿಗಳೊಂದಿಗೆ ಪ್ರಿಯಾಂಕ್​ ಚರ್ಚೆ

ಕಲಬುರಗಿಯಲ್ಲಿ ನಿರ್ಮಿಸಲಿರುವ  ವಚನ ಮಂಟಪದ ನೀಲನಕ್ಷೆ ಕುರಿತು ವಾಸ್ತುಶಿಲ್ಪಿ ಬಸವರಾಜ ಖಂಡೇರಾವ ಸಚಿವ ಪ್ರಿಯಾಂಕ್​ ಖರ್ಗೆ ಅವರಿಗೆ ವಿವರಿಸಿದರು.
ಕಲಬುರಗಿಯಲ್ಲಿ ನಿರ್ಮಿಸಲಿರುವ ವಚನ ಮಂಟಪದ ನೀಲನಕ್ಷೆ ಕುರಿತು ವಾಸ್ತುಶಿಲ್ಪಿ ಬಸವರಾಜ ಖಂಡೇರಾವ ಸಚಿವ ಪ್ರಿಯಾಂಕ್​ ಖರ್ಗೆ ಅವರಿಗೆ ವಿವರಿಸಿದರು.
Published on
ಕಲಬುರಗಿ: ನಗರಕ್ಕೆ ಸಮೀಪವಿರುವ ಕಪನೂರು ಗ್ರಾಮದ ಬಳಿ 6.06 ಗುಂಟೆ ಪ್ರದೇಶದಲ್ಲಿ ಬಸವಾದಿ ಶರಣ-ಶರಣೆಯರ ಕುರಿತು ನೂತನ ವಚನ ಮಂಟಪ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್​ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಉದ್ದೇಶಿತ ವಚನಮಂಟಪವು ಕರ್ನಾಟಕದ ಸಾಂಸತಿಕ ನಾಯಕ ಬಸವಣ್ಣನವರ ವಚನಗಳು ಸೇರಿ ವಚನ ಕ್ರಾಂತಿಯಲ್ಲಿ ಭಾಗಿಗಳಾಗಿರುವ ಕನ್ನಡದ ಎಲ್ಲ ಶರಣ&ಶರಣೆಯರ ಚಿತ್ರಗಳು ಹಾಗೂ ಅವರ ವಚನಗಳನ್ನು ಹೊಂದಿರುತ್ತದೆ. ತೆರೆದ ಸಭಾಂಗಣವನ್ನು ಚರ್ಚೆ, ಉಪನ್ಯಾಸ, ಸಭೆಗಳನ್ನು ನಡೆಸುವಂತೆ ವಿನ್ಯಾಸಗೊಳಿಸಲಾಗುವುದು ಎಂದು ಹೇಳಿದರು.
ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಹತ್ತಾರು ಕಾರ್ಯಕ್ರಮ ಹಾಕಿಕೊಂಡಿದ್ದು, ಈಗಾಗಲೆ ಕಾಳಗಿ ಸೂರ್ಯನಾರಾಯಣ ದೇವಾಲಯ ಸಂರಣ ಕಾಮಗಾರಿ, ಸೇಡಂ ತಾಲೂಕಿನ ಪಾರಂಪರಿಕ ತಾಣವಾದ ಮಳಖೇಡ ಕೋಟೆಯ ಅಭಿವೃದ್ಧಿ ಕಾಮಗಾರಿ, ಚಿತ್ತಾಪುರ ತಾಲೂಕು ನಾಗಾವಿ ಪಾರಂಪರಿಕ ಪ್ರದೇಶದಲ್ಲಿರುವ ಪ್ರಾಚ್ಯ ಕುರುಹುಗಳ ಅಭಿವೃದ್ಧಿ, ಸಂರಣಾ ಕಾಮಗಾರಿ ಮತ್ತು ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಯೋಜನೆ ರೂಪಿಸಿದ್ದು, ಈ ಕಾಮಗಾರಿಗಳ ಬಗ್ಗೆಯೂ ಸಭೆಯಲ್ಲಿ ಅದಿಕಾರಿಗಳೊಂದಿಗೆ ಚರ್ಚಿಸಿದರು. ಜತೆಗೆ ಚಿತ್ತಾಪುರ ತಾಲೂಕಿನಲ್ಲಿರುವ ಕನಗನಹಳ್ಳಿಯಲ್ಲಿನ ಐತಿಹಾಸಿಕ ಬೌದ್ಧನೆಲೆ ಮತ್ತು ಪ್ರಾಚ್ಯ ಕುರುಹುಗಳ ಅಭಿವೃದ್ಧಿ ಸಂರಣಾ ಕಾಮಗಾರಿಯ ಬಗ್ಗೆಯೂ ಸಚಿವರು ಕೆಲವು ನಿರ್ದೇಶನ ನೀಡಿದರು.
ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ತ್ರಿಲೋಕಚಂದ್ರ ಕೆ.ವಿ, ವಾಸ್ತುಶಿಲ್ಪಿ ಬಸವರಾಜ ಖಂಡೇರಾವ ಇತರರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net