ಪೊಲೀಸರು ನೀಡಿರುವ ಪ್ರಾಥಮಿಕ ವರದಿಯನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಆಯೋಗದ ಹಿರಿಯ ಸದಸ್ಯರ ಅಧ್ಯಕ್ಷತೆಯಲ್ಲಿ ಆಂತರಿಕ ತನಿಖಾ ಉಪಸಮಿತಿ ರಚಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯ ಪ್ರತಿಯೊಂದು ಹಂತ, ಸಂಬಂಧಿತ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ವಾಸ್ತವಾಂಶಗಳ ಕುರಿತ ವಿವರವಾದ ವರದಿಯನ್ನು ವಾರದೊಳಗೆ ಸಲ್ಲಿಸುವಂತೆ ಉಪಸಮಿತಿಗೆ ನಿರ್ದೇಶನ ನೀಡಲಾಗಿದೆ ಎಂದರು.