ದೇವದುರ್ಗ: ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಎಲ್ಲ ಹೋರಾಟಗಾರರಿಗೆ ಮಾದರಿಯಾಗಿದ್ದಾರೆ. ಅವರ ಪ್ರತಿ ಹೋರಾಟವೂ ಮೈಲಿಗಲ್ಲು ಆಗಿದ್ದು ಶೋಷಿತರಿಗೆ ನ್ಯಾಯ ಒದಗಿಸಿವೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಹನುಮಂತಪ್ಪ ಮನ್ನಾಪುರಿ ಹೇಳಿದರು.
ಪಟ್ಟಣದಲ್ಲಿ ದಲಿತ ಸಂಘಟನೆಯಿಂದ ಮಂಗಳವಾರ ಆಯೋಜಿಸಿದ್ದ ಪ್ರೊ.ಬಿ.ಕೃಷ್ಣಪ್ಪ ಅವರ 88ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ದಲಿತರಿಗೆ ಸರ್ಕಾರಿ ಭೂಮಿ, ನಿವೇಶನ ನೀಡಬೇಕು ಎಂದು ಹೋರಾಟ ಮಾಡಿದ್ದಾರೆ. ಎಲ್ಲಿಯಾದರೂ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರ ನಡೆದಾಗ ಎದೆಗಾರಿಕೆಯಿಂದ ಹೋರಾಟ ಮಾಡಿ ನ್ಯಾಯ ಒದಗಿಸಿದ್ದಾರೆ ಎಂದರು.