ವೈರಸ್ ನಿಯಂತ್ರಣಕ್ಕೆ ಕಾರ್ಯಕ್ರಮ

ಹಳೇ ಬಂಡಿ ಹರ್ಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗ್ರಾಪಂ ಮಾಜಿ ಉಪಾಧ್ಯಕ್ಷ ಮದರ್ ಬಿ. ಮೆಹಬೂಬ್ ಬಾಷಾ ಚಿಕ್ಕಮಸೂತಿ, ಗ್ರಾಪಂ ಮಾಜಿ ಸದಸ್ಯ ಆಂಜನೇಯಲು, ಗ್ರಾಮದ ಮುಖಂಡ ಕನಕಪ್ಪ ಮುಂಡರಗಿ, ಖಾಜಾಸಾಬ್ ಗೋರೆಬಾಳ್, ರಾಮ್ ಬಾಬು, ಆಶಾ ಕಾರ್ಯಕರ್ತೆ ಕಾವೇರಿ, ಅಂಗನವಾಡಿ ಕಾರ್ಯಕರ್ತೆ ಚಂದ್ರಮ್ಮ ಇತರರಿದ್ದರು.

Published on
ಮುನಿರಾಬಾದ್: ಸಮೀಪದ ಹಳೇ ಬಂಡಿ ಹರ್ಲಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಐದು ವಷರ್ದೊಳಗಿನ ಮಕ್ಕಳಿಗಾಗಿ ವ್ಯಾಕ್ಸಿನ್ ಹಾಕಲು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 
ಗ್ರಾಪಂ ಮಾಜಿ ಅಧ್ಯಕ್ಷ ಹನುಮಂತಪ್ಪ ಕಾಟ್ರಳ್ಳಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಭವಿಷ್ಯದಲ್ಲಿ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆ ಉಂಟುಮಾಡುವ ವೈರಸ್ ನಿಯಂತ್ರಣಕ್ಕಾಗಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪೋಷಕರು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದರು.  
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net