ಭಾಲ್ಕಿ: ರಕ್ಷಾ ಬಂಧನ ಕೇವಲ ಅಣ್ಣ-ತಂಗಿಯರ ಹಬ್ಬವಲ್ಲದೆ ಇಡೀ ಸಮಾಜದ ಸುರಕ್ಷತೆ, ಸದಾಚಾರ ಮತ್ತು ಆಧ್ಯಾತ್ಮಿಕ ರಕ್ಷಣೆ ನೀಡುವ ಪವಿತ್ರ ಸಂಕಲ್ಪವಾಗಿದೆ. ಮಹಿಳೆಯರನ್ನು ಗೌರವದಿಂದ ಕಂಡು ರಕ್ಷಣೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಪರಿಸರದಲ್ಲಿ ಶ್ರೀ ಗುರುಬಸವ ಪಟ್ಟದ್ದೇವರ ನೇತೃತ್ವದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಜಾತಿ, ಮತದ ಭೇದವಿಲ್ಲದೆ ಸಮಾಜದಲ್ಲಿ ಸೌಹಾರ್ದ ಮತ್ತು ಸಹೋದರತ್ವ ಮೂಡಿಸುವುದೇ ಈ ಹಬ್ಬದ ಮುಖ್ಯ ಉದ್ದೇಶ ಎಂದರು.
ಸಂಸ್ಥೆ ಮೇಲ್ವಿಚಾರಕಿ ಜಯಕ್ಕ ಗಾಂವಕರ್ ಪ್ರಾರ್ಥನೆ ಗೀತೆ ಹಾಡಿದರು. ವಿದ್ಯಾರ್ಥಿಗಳು ಬಸವಗುರು ಪೂಜೆ ನೆರವೇರಿಸಿದರು. ಸಾವಿರಾರು ವಿದ್ಯಾರ್ಥಿನಿಯರು ಸಾಲಿನಲ್ಲಿ ನಿಂತು ವಿದ್ಯಾರ್ಥಿಗಳಿಗೆ ರಾಖಿ ಕಟ್ಟಿ ಸಿಹಿ ತಿನ್ನಿಸಿ ಶುಭ ಕೋರಿದರು. ವಿದ್ಯಾರ್ಥಿಗಳು ವಿದ್ಯಾರ್ಥಿನಿಯರ ಪಾದಕ್ಕೆ ನಮಸ್ಕರಿಸಿದರು.
"
ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಸಾಮಾಜಿಕ ಒಗ್ಗಟ್ಟು ಮತ್ತು ಪ್ರಕೃತಿ ಮೇಲೆ ಪ್ರೀತಿ ಮೂಡಿಸಲು ರಕ್ಷಾ ಬಂಧನ ಒಂದು ಅತ್ಯುತ್ತಮ ವೇದಿಕೆಯಾಗಿದೆ.
— ಶ್ರೀ -ಡಾ.ಬಸವಲಿಂಗ ಪಟ್ಟದ್ದೇವರು ಹಿರೇಮಠ ಸಂಸ್ಥಾನ ಭಾಲ್ಕಿ