ಕೆರೆಯ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ಬನ್ನೂರಿನ ಸಮೀಪದಲ್ಲಿನ ಕುಪ್ಯ ಗ್ರಾಮದಲ್ಲಿ ನಮ್ಮ ಊರು ನಮ್ಮ ಕೆರೆ ಯೋಜನೆಯ ಸಮಿತಿ ರಚನೆಯ ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಉಮಾವತಿ ಮಾತನಾಡಿದರು. ಕೃಷಿ ಮೇಲ್ವಿಚಾರಕ ಮಂಜುನಾಥ್, ಪುಷ್ಪರಾಜ್ ಸೇರಿದಂತೆ ಪ್ರಮುಖರು ಇದ್ದರು.
ಬನ್ನೂರಿನ ಸಮೀಪದಲ್ಲಿನ ಕುಪ್ಯ ಗ್ರಾಮದಲ್ಲಿ ನಮ್ಮ ಊರು ನಮ್ಮ ಕೆರೆ ಯೋಜನೆಯ ಸಮಿತಿ ರಚನೆಯ ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಉಮಾವತಿ ಮಾತನಾಡಿದರು. ಕೃಷಿ ಮೇಲ್ವಿಚಾರಕ ಮಂಜುನಾಥ್, ಪುಷ್ಪರಾಜ್ ಸೇರಿದಂತೆ ಪ್ರಮುಖರು ಇದ್ದರು.
Published on

ಬನ್ನೂರು:

ಕೆರೆಗಳು ಊರಿನ ಜೀವಾಳ, ಜನಜಾನುವಾರುಗಳಿಗೆ ನೀರಿನ ವ್ಯವಸ್ಥೆಯ ಮೂಲ. ಹೀಗಿರುವಾಗ ನಮ್ಮೂರಿನ ಕೆರೆಯನ್ನು ರಕ್ಷಿಸಿ ಅವುಗಳನ್ನು ಅಭಿವೃದ್ಧಿಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ‘ನಮ್ಮ ಊರು ನಮ್ಮ ಕೆರೆ’ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮಾಪತಿ ತಿಳಿಸಿದರು.

ಪಟ್ಟಣದ ಸಮೀಪದಲ್ಲಿನ ಕುಪ್ಯ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ‘ನಮ್ಮ ಊರು ನಮ್ಮ ಕೆರೆ’ ಯೋಜನೆಯ ಸಮಿತಿ ರಚನೆಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೆರೆಗಳು ಊರಿನ ಸೌಂದರ್ಯವನ್ನು ಹೆಚ್ಚಿಸುವ ಕಾರ್ಯವನ್ನು ಮಾಡುತ್ತವೆ. ಜನರಿಗೆ ನೆಮ್ಮದಿಯನ್ನುಂಟು ಮಾಡುತ್ತದೆ. ಈ ನಿಟ್ಟಿನಲ್ಲಿ ಕೆರೆಯ ಅಭಿವೃದ್ಧಿಗೆ ಗ್ರಾಮದ ಜನರು ಸಹಕಾರ ನೀಡುವಂತೆ ಮನವಿ ಮಾಡಿದರು.
ಕುಪ್ಯ ಗ್ರಾಮದ ಕೋರೇಗೌಡ ಹಾಗೂ ಮಾದೇಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಪುಷ್ಪರಾಜ್ ಕೆರೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ತಿಳಿಸಿದರು. ಕೃಷಿ ಮೇಲ್ವಿಚಾರಕ ಮಂಜುನಾಥ್, ರಂಗಸಮುದ್ರ ವಲಯ ಮೇಲ್ವಿಚಾರಕ ನಾಗರಾಜ್ ಸೇರಿದಂತೆ ಪಂಚಾಯಿತಿ ಸದಸ್ಯರು, ಊರಿನ ಮುಖಂಡರು, ಸೇವಾ ಪ್ರತಿನಿಧಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net