ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳ ರಕ್ಷಣೆ / DODABALLAPUR

ದೊಡ್ಡಬಳ್ಳಾಪುರದ ಗ್ರಾಮಾಂತರ ಪೊಲೀಸ್​ ವಶಕ್ಕೆ ಪಡೆದ ಹಸುಗಳು.
ದೊಡ್ಡಬಳ್ಳಾಪುರದ ಗ್ರಾಮಾಂತರ ಪೊಲೀಸ್​ ವಶಕ್ಕೆ ಪಡೆದ ಹಸುಗಳು.
Published on
ದೊಡ್ಡಬಳ್ಳಾಪುರ : ಕಸಾಯಿಖಾನೆಗೆ ಸಾಗಿಸುತ್ತಿದ್ದ ನಾಲ್ಕು ಹಸುಗಳನ್ನು ಬುಧವಾರ ರಾತ್ರಿ ಗ್ರಾಮಾಂತರ ಪೊಲೀಸರು ರಸಿದ್ದಾರೆ. ಬಕ್ರೀದ್​ ಹಿನ್ನೆಲೆಯಲ್ಲಿ ಗ್ರಾಮಾಂತರ ಠಾಣೆ ಇನ್​ಸ್ಪೆಕ್ಟರ್​ ಡಾ.ಎಂ.ಬಿ.ನವೀನ್​ ಕುಮಾರ್​ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ಮಾಡಲಾಗಿದ್ದು, ಕಂಟನಕುಂಟೆ ಸಮೀಪದ ಚೆಕ್​ಪೋಸ್ಟ್​ನಲ್ಲಿ ವಾಹನಗಳ ತಪಾಸಣೆ ಮಾಡಲಾಗುತ್ತಿತ್ತು. ಈ ವೇಳೆ ಅನುಮಾನಾಸ್ಪದವಾಗಿ ಸಾಗುತ್ತಿದ್ದ ವಾಹನ ತಪಾಸಣೆ ಮಾಡಿದಾಗ ನಾಲ್ಕು ಹಸುಗಳನ್ನು ಕಸಾಯಿಖಾನೆಗೆ ರವಾನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಹಸುಗಳ ಸಾಗಣೆ ಮಾಡಲಾಗುತ್ತಿದ್ದು, ಪ್ರಕರಣದಲ್ಲಿ ದೊಡ್ಡಬಳ್ಳಾಪುರ ರಾಜೀವ್​ ಗಾಂಧಿ ಬಡಾವಣೆಯ ಯತೀಶ್​ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಕ್ಷಣೆ ಮಾಡಲಾದ ಹಸುಗಳನ್ನು ಗೋಶಾಲೆಗೆ ಬಿಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net