ಶಾಸಕ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಅವರಿಗೆ ಮನವಿಪತ್ರ ಸಲ್ಲಿಕೆ
ಹುಮನಾಬಾದ್: ವಿದ್ಯುತ್ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ, ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿ, ಕರ್ನಾಟಕ ಕಬ್ಬು ಬೆಳೆಗಾರರ ಸಂಘದಿಂದ ಪಟ್ಟಣದ ಜೆಸ್ಕಾಂ ಕಚೇರಿ ಎದುರಿಗೆ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಪ್ರತಿಭಟನಕಾರರು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಅವರ ನಿವಾಸಕ್ಕೆ ತೆರಳಿ ಮನವಿ ಪತ್ರ ಸಲ್ಲಿಸಿ, ವಿದ್ಯುತ್ ದೇಶದ ಭದ್ರತೆ ಮತ್ತು ಜನರ ಬದುಕಿಗೆ ಅತ್ಯಗತ್ಯವಾಗಿದ್ದು. ನಮ್ಮ ಇಂಧನ ಇಲಾಖೆಯ ನೌಕರರ ಹಿತದೃಷ್ಟಿಯಿಂದ ಟಾಟಾ ಪವರ್ ಕಂಪನಿಯು ಸಲ್ಲಿಸಿದ ಅರ್ಜಿಗೆ ಪರವಾನಗೆಯನ್ನು ತಿರಸ್ಕರಿಸಬೇಕು. ವಿದ್ಯುತ್ ವಿತರಣಾ ಕಂಪನಿಗಳನ್ನು ರಾಜ್ಯ ಸರ್ಕಾರದ ಅಧೀನದಲ್ಲಿಯೇ ಕಾರ್ಯನಿರ್ವಹಿಸುವಂತೆ ಒತ್ತಡ ಹಾಕಬೇಕೆಂದು ಮನವಿ ಮಾಡಿದರು.