ಪಾವಗಡ: ತುಮಕೂರಿನ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಹಿರಿಯ ವಕೀಲ ಎಂ.ಸಿ.ರವೀಶ್ ಅವರ ಮೇಲೆ ಕದಾರ ಹಲ್ಲೆ ನಡೆಸಿದ್ದನ್ನು ಖಂಡಿಸಿ ತಾಲೂಕಿನ ವಕೀಲ ಸಂದಿಂದ ಬುಧವಾರ ನ್ಯಾಯಾಲಯ ಆವರಣದಲ್ಲಿ ಪ್ರತಿಭಟನೆ ನಡೆಸಿತು.
ತಾಲೂಕಿನ ವಕೀಲ ಸಂಘದ ಕಾರ್ಯದರ್ಶಿ ಚಂದ್ರಪ್ಪ ಮಾತನಾಡಿ, ಕರ್ತವ್ಯ ನಿರತ ವಕೀಲರ ಮೇಲೆ ನ್ಯಾಯಾಲಯ ಆವರಣದಲ್ಲಿ ಹಲ್ಲೆ ನಡೆಸಿರುವುದು ಖಂಡನೀಯ. ತಕ್ಷಣ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ವಕೀಲ ಸಂಘದ ಅಧ್ಯಕ್ಷ ರಂಗನಾಥ್ ಮಾತನಾಡಿ, ವಕೀಲರ ಮೇಲಿನ ಹಲ್ಲೆ ಪ್ರಕರಣ ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕಿ ವಕೀಲರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಸಿದರು.
ವಕೀಲ ಸಂಘದ ಉಪಾಧ್ಯಕ್ಷ ಹನುಮಂತರಾಯ, ಹಿರಿಯ ವಕೀಲ ಎಸ್.ಆರ್.ವೆಂಕಟರಾಮರೆಡ್ಡಿ, ಆಂಜನೇಯಲು, ನಾಗೇಂದ್ರರೆಡ್ಡಿ, ಉಗ್ರ ಮೂರ್ತಿ ಇತರರು ಇದ್ದರು.