ವಿಜಯಪುರ ಹೋಬಳಿ ಮುದುಗುರ್ಕಿ ಬಳಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಗ್ರಾಮದ ಸುಧಾಕರ್ ಎಂಬುವವರ ಶವವನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ವಿಜಯಪುರ : ದೇವನಹಳ್ಳಿ ತಾಲೂಕು ವೆಂಕಟಗಿರಿಕೋಟೆ ಗ್ರಾಪಂ ವ್ಯಾಪ್ತಿಯ ಮುದುಗುರ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಬುಧವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಗ್ರಾಮದ ಸುಧಾಕರ (37) ಮೃತಪಟ್ಟಿದ್ದಾರೆ.
ರಾತ್ರಿ 8 ಗಂಟೆ ಸುಮಾರಿನಲ್ಲಿ ಹೆದ್ದಾರಿ ದಾಟುವಾಗ ಅಪಘಾತವಾಗಿದ್ದು, ಸುಧಾಕರ್ ತೀವ್ರ ಗಾಯಗೊಂಡಿದ್ದರು. ಕೂಡಲೇ ಸ್ಥಳಿಯರು ದೇವನಹಳ್ಳಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಕೊನೆಯುಸಿರೆಳೆದರು.
ರಸ್ತೆಯಲ್ಲಿ ಶವವಿಟ್ಟು ಆಕ್ರೋಶ: ರಸ್ತೆ ದಾಟುವಾಗ ಕನಿಷ್ಠ ವಾರಕ್ಕೊಬ್ಬರಂತೆ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶಗೊಂಡ ಗ್ರಾಮಸ್ಥರು ಹೆದ್ದಾರಿ ಮಧ್ಯೆ ಶವವಿಟ್ಟು ರಸ್ತೆ ಬಂದ್ ಮಾಡಿ ಪ್ರತಿಭಟನೆ ಕುಳಿತರು. ಈ ವೇಳೆ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.
ಪೊಲೀಸರು, ತಹಸೀಲ್ದಾರ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಿ ಶವವನ್ನು ರಸ್ತೆಯಿಂದ ತೆರವುಗೊಳಿಸಲು ಹರಸಾಹಸಪಟ್ಟರು. ಕೊನೆಗೆ ಆದಷ್ಟು ಬೇಗ ಹೆದ್ದಾರಿ ಪ್ರಾಧಿಕಾರ ಮತ್ತು ಸಚಿವರ ಜತೆ ಮಾತನಾಡಿ ಅಂಡರ್ ಪಾಸ್ ನಿಮಾರ್ಣಕ್ಕೆ ಕ್ರಮ ವಹಿಸಲಾಗುವುದು ಎಂಬ ಭರವಸೆ ನೀಡಿದ ನಂತರ ಶವ ತೆಗೆದು ಸುಗಮ ಸಂಚಾರಕ್ಕೆ ಗ್ರಾಮಸ್ಥರು ಅನುವು ಮಾಡಿಕೊಟ್ಟರು. ನಂತರ ಅಂತ್ಯಸಂಸ್ಕಾರ ಮಾಡಲಾಯಿತು.
ಎರಡು ತಿಂಗಳ ಹಿಂದೆ ದೇವನಹಳ್ಳಿ ಟೌನ್ನಿಂದ ಆಂಧ್ರಪ್ರದೇಶದ ಗಡಿಯವರೆಗೆ ರಾಷ್ಟ್ರೀಯ ಹೆದ್ದಾರಿ 207ರಲ್ಲಿ ್ಲೆ$ ಓವರ್ ನಿಮಾರ್ಣ ಮಾಡಿ, ತಡೆರಹಿತ ಹೆದ್ದಾರಿಯನ್ನಾಗಿ ಪರಿವರ್ತಿಸಲಾಗುವುದು. ಈ ಬಗ್ಗೆ ದೆಹಲಿಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರಕ್ಕೆ ಪತ್ರ ವ್ಯವಹಾರ ಮಾಡಲಾಗಿದೆ.