ಡೀಸೆಲ್, ಪೆಟ್ರೋಲ್ ಮತ್ತು ರಸಗೊಬ್ಬರ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂದ ಕಾರ್ಯಕರ್ತರು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಜಿಲ್ಲಾಧ್ಯಕ್ಷ ನಾಗೇಂದ್ರಪ್ಪ ಥಂಬೆ, ರಮೇಶ ರಾಗಿ, ಮಂಜುಳಾ ಭಜಂತ್ರಿ, ಮಂಜು ಸಿ.ಕೆ, ಜಗದೇವಿ, ಸಿದ್ದು ಪಾಟೀಲ್ ಇತರರಿದ್ದರು.
ಕಲಬುರಗಿ: ಏರಿಕೆಯಾಗಿರುವ ಡೀಸೆಲ್, ಪೆಟ್ರೋಲ್ ಮತ್ತು ರಸಗೊಬ್ಬರ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ವಿಶೇಷವಾಗಿ ರಸಗೊಬ್ಬರ ಬೆಲೆ ತಕ್ಷಣ ಇಳಿಸಬೇಕು. ರೈತರಿಗೆ ನೇರ ನಗದು ವರ್ಗಾವಣೆ ಮೂಲಕ ಹೆಚ್ಚುವರಿ ಸಹಾಯಧನ ನೀಡಬೇಕು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಡೀಸೆಲ್ ರಿಯಾಯಿತಿ ದರದಲ್ಲಿ ಕಾರ್ಡ್ಗಳ ಮೂಲಕ ವಿತರಣೆ ಮಾಡಬೇಕು, ಡಾ.ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.
ಬೆಲೆ ಹೆಚ್ಚಳದಿಂದಾಗಿ ಕೃಷಿ ಉತ್ಪಾದನಾ ವೆಚ್ಚ ಗಣನೀಯವಾಗಿ ಹೆಚ್ಚಳವಾಗಿದೆ. ಉಳುಮೆ, ಬಿತ್ತನೆ, ಕೋಯ್ಲು ಮತ್ತು ಸಾಗಾಣಿಕೆಗೆ ಡೀಸೆಲ್ ಅಗತ್ಯವಿದ್ದು, ದರ ಏರಿಕೆಯಿಂದ ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ. ರಸಗೊಬ್ಬರ ಮೇಲಿನ ಸಬ್ಸಿಡಿ ಹೆಚ್ಚಿಸಿ, ರೈತರಿಗೆ ಕೈಗೆಟಕುವ ದರದಲ್ಲಿ ದೊರೆಯುವಂತೆ ಮಾಡಬೇಕು ಎಂದು ಆಗ್ರಹಿಸಿದರು.
ರೈತರು ತಮಗೆ ಅಗತ್ಯವಿದ್ದ ರಸಗೊಬ್ಬರ ಖರೀದಿಸಲು ಮುಕ್ತ ಅವಕಾಶ ನೀಡಬೇಕು. ಕಾಳಸಂತೆ ಮತ್ತು ಕೃತಕ ಅಭಾವಕ್ಕೆ ಕಡಿವಾಣ ಹಾಕಬೇಕು, ಕೃಷಿ ಚಟುವಟಿಕೆಗಳಿಗೆ ರಿಯಾಯಿತಿ ದರದಲ್ಲಿ ಡೀಸೆಲ್ ಪೂರೈಸಬೇಕು, ಬೆಳೆಗೆ ವೈಜ್ಞಾನಿಕ ಬೆಂಬಲ ಬೆಲೆ ೂಷಿಸಬೇಕು ಎಂದು ಮನವಿ ಮಾಡಿದರು.
ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಮೂಲಕ ಸಲ್ಲಿಸಿದರು. ಜಿಲ್ಲಾಧ್ಯಕ್ಷ ನಾಗೇಂದ್ರಪ್ಪ ಥಂಬೆ, ರಮೇಶ ರಾಗಿ, ಮಂಜುಳಾ ಭಜಂತ್ರಿ, ಮಂಜು ಸಿ.ಕೆ, ಜಗದೇವಿ, ಸಿದ್ದು ಪಾಟೀಲ್ ಇತರರಿದ್ದರು.